ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ - ಸುಪ್ರೀಂ

7

ಸಂಪೂರ್ಣ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ - ಸುಪ್ರೀಂ

Published:
Updated:

ನವದೆಹಲಿ (ಐಎಎನ್‌ಎಸ್): ಪರಿಸರ ಹಾಗೂ ಪ್ರಾಣಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಹೇಳಿರುವ ಸುಪ್ರೀಂ ಕೋರ್ಟ್ ಈ ಕುರಿತಂತೆ ಸೋಮವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.`ಸಾರ್ವಜನಿಕ ಹಿತಾಸಕ್ತಿ ಅರ್ಜಿ~ಯೊಂದರ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ನೇತೃತ್ವದ ಪೀಠವು ಪ್ಲಾಸ್ಟಿಕ್ ನಿಷೇಧಿಸುವ ಕುರಿತು ಕೇಂದ್ರ, ರಾಜ್ಯಸರ್ಕಾರಗಳು ಹಾಗೂ ಪ್ಲಾಸ್ಟಿಕ್ ಉತ್ಪಾದಕರಿಗೆ ನೋಟಿಸ್ ಜಾರಿಗೊಳಿಸಿದೆ.ಇದೇ ವೇಳೆ ಪೀಠವು ಪ್ಲಾಸ್ಟಿಕ್ ನಿಷೇಧಿಸಿ ಇಲ್ಲವೇ ಬಳಕೆ ಮಾಡಿದ ಪ್ಲಾಸ್ಟಿಕ್‌ನ್ನು ತಯಾರಕರು ಆಯ್ದು ಪುರ್ನಬಳಕೆಗೆ ಬಳಸಬೇಕು ಎಂದು ಸಲಹೆ ನೀಡಿದೆ.ಪರಿಸರ ಹಾಗೂ ಪ್ರಾಣಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಕರುಣಾ ಸೊಸೈಟಿ ಪಿಐಎಲ್ ಸಲ್ಲಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry