ಸಂಭ್ರಮದ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ

7

ಸಂಭ್ರಮದ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ

Published:
Updated:

ಅರಸೀಕೆರೆ: ಚೆಲ್ಲಾಪುರದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತಾದಿಗಳ  ಸಮ್ಮುಖದಲ್ಲಿ ಸಡಗರ ಸಂಭ್ರಮದ ನಡುವೆ ವಿಜೃಂಭಣೆಯಿಂದ ನೆರವೇರಿತು.ಗ್ರಾಮದ ಬೀದಿಗಳನ್ನು ಮಾವಿನ ತೋರಣ ಬಾಳೆ ಗಿಡಗಳಿಂದ ಸಿಂಗರಿಸಲಾಗಿತ್ತು. ಎಲ್ಲಿ ನೋಡಿದರೂ ಮಹಿಳೆಯರು, ಪುಟಾಣಿ ಮಕ್ಕಳು ಹರ್ಷದಿಂದ ಜಾತ್ರೆಯಲ್ಲಿ ಓಡಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮಂಗಳವಾರ ಮುಂಜಾನೆ 4 ಗಂಟೆಗೆ ಚಂದ್ರ ಮಂಡಲೋತ್ಸವ ಮತ್ತು ಕೆಂಡ ಸೇವೆ ಜರುಗಿದವು.ಬಳಿಕ ದೇವಾಲಯದಲ್ಲಿ ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿ, ಯಾದಾಪುರದ ಜೇನುಕಲ್ ಸಿದ್ದೇಶ್ವರಸ್ವಾಮಿ ಮತ್ತು ಗ್ರಾಮದೇವತೆ ಕರಿಯಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮೂರ್ತಿ ಗಳನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಶ್ರಾವಣ: ವಿಶೇಷ ಪೂಜೆ

ಅರಸೀಕೆರೆ:
ಕಡೇ ಶ್ರಾವಣ ಸೋಮ ವಾರ ವಾದ್ದರಿಂದ ತಾಲ್ಲೂಕಿನ ಆನೇಕ ಈಶ್ವರ, ಬಸವೇಶ್ವರ ದೇವಾಲ ಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಉತ್ಸವಗಳು ಭಕ್ತರ ಸಡಗರ ಸಂಭ್ರಮದ ನಡುವೆ ನಡೆದವು. ಬೊಮ್ಮಸಂದ್ರ ಗ್ರಾಮದ ಕೆರೆ ಏರಿ ಮೇಲಿರುವ ಬೊಮ್ಮಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ರಾತ್ರಿ ದೇವ ರನ್ನು ವಿವಿಧ ಹೂಗಳಿಂದ ಶೃಂಗರಿ ಸಿದ್ದರೆ, ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.ಶಾಸಕ ಕೆ.ಎಂ. ಶಿವಲಿಂಗೇಗೌಡ ರಾತ್ರಿ ಬೊಮ್ಮಲಿಂಗೇಶ್ವರ ದೇವಾಲಯಕ್ಕೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು.ಎಪಿಎಂಸಿ ಅಧ್ಯಕ್ಷ ಮುರುಂಡಿ ಶಿವಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ. ಶಿವಮೂರ್ತಿ, ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್,ಶಂಕರನಹಳ್ಳಿ ಗ್ರಾ.ಪಂ ಸದಸ್ಯ ಮಹೇಶ್, ಮಾಜಿ ಅಧ್ಯಕ್ಷ ಪಿ.ಕೆ. ಮೈಲಾರಪ್ಪ, ಚಂದ್ರಪ್ಪ, ಚೌಡಪ್ಪ, ಶಿವದೇವ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry