ಶನಿವಾರ, ಮೇ 21, 2022
28 °C

ಸಂಭ್ರಮದ ಶ್ರೀನಿವಾಸ ಕಲ್ಯಾಣೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವ ಈಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ  ನೆರವೇರಿತು.ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಕಲ್ಯಾಣೋತ್ಸವದಲ್ಲಿ ತಿರುಪತಿಯ ಮಾದರಿಯಲ್ಲೇ ಮಂಟಪಗಳನ್ನುನಿರ್ಮಿಸಿ  ತಿರುಮಲದಿಂದಲೇ   ಶ್ರೀನಿವಾಸ- ಪದ್ಮಾವತಿಯ  ಮೂರ್ತಿಗಳನ್ನು ತರಿಸಿ ಪೂಜೆ ಸಲ್ಲಿಸಲಾಯಿತು.

ಶ್ರೀನಿವಾಸ-ಪದ್ಮಾವತಿಯ ಮೂರ್ತಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ,  ಆಭರಣಗಳ ಅಲಂಕಾರಗಳನ್ನು ಮಾಡಲಾಗಿತ್ತು.ಕಲ್ಯಾಣೋತ್ಸವದ ಜನ್ನಘಟ್ಟ ಸೇರಿದಂತೆ ತಾಲೂಕು,  ಜಿಲ್ಲೆಯ ವಿವಿಧೆಡೆಯಿಂದ ಅಪಾರ ಭಕ್ತರು ಪಾಲ್ಗೊಂಡಿದ್ದರು. ಜಿ. ಪಂ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಟಿ.ವಿ.ಕೃಕಷ್ಣಪ್ಪ, ಟಿ.ವಿ.ತಿಮ್ಮರಾಯಪ್ಪ ಕುಟುಂಬದವರು ಹಾಗೂ ಗ್ರಾಮಸ್ಥರು ಸೇರಿ  ಕಲ್ಯಾಣೋತ್ಸವವನ್ನು ಆಯೋಜಿಸಿದ್ದರು.ಬೆಂಗಳೂರಿನ ಶ್ರೀವಾರಿ  ಫೌಂಡೇಷನ್‌ನ ಎಸ್.ವೆಂಕಟೇಶಮೂರ್ತಿ ಉಸ್ತವಾರಿ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.