ಶುಕ್ರವಾರ, ಏಪ್ರಿಲ್ 3, 2020
19 °C

ಸಂಭ್ರಮದ ಸಾಂಸ್ಕೃತಿಕ ಹಬ್ಬ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ತಾಲ್ಲೂಕಿನ ಬ್ಲಾಸಮ್ ಶಾಲೆಯ ಇಪ್ಪತ್ತನೆಯ ವರ್ಷದ ಸಾಂಸ್ಕೃತಿಕ ಹಬ್ಬವನ್ನು ಗುರುವಾರ ಅದ್ದೂರಿಯಾಗಿ ಆಚರಿಸಲಾಯಿತು.ಹತ್ತನೇ ತರಗತಿ ವಿದ್ಯಾರ್ಥಿ ಉಮ್ಮೇಹಾನಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿ ಐದನೇ ತರಗತಿಯ ಆರ್.ಅನುಶ್ರೀ. `ಶಾಲೆಯಲ್ಲಿ ಎಲ್ಲ ಮಕ್ಕಳಿಗೂ ಪ್ರತಿಭಾ ಪ್ರದರ್ಶನದಲ್ಲಿ ಸಮಾನ ಅವಕಾಶ ನೀಡಿ, ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲೆಯ ಸಂಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ~ ಎಂದರು.ಪಿ.ಕೆ.ಜಿ ತರಗತಿಯಿಂದ 10 ನೇ ತರಗತಿವರೆಗಿನ ಮಕ್ಕಳು ಹಿಂದೂಸ್ಥಾನಿ ಗಾಯನ, ಭರತನಾಟ್ಯ, ನಾಟಕ, ತಬಲಾ  ವಿವಿಧ ನೃತ್ಯಗಳ ಮೂಲಕ ಮನಸೂರೆಗೊಳ್ಳುವ ವರ್ಣರಂಜಿತ ಕಾರ್ಯಕ್ರಮ ನೀಡಿ ಪ್ರೇಕ್ಷಕರಿಂದ ಪ್ರಶಂಸೆ ಪಡೆದರು. ಹತ್ತನೇ ತರಗತಿಯ ವಿದ್ಯಾ.ಕೆ.ವಿ ಸ್ವಾಗತಿಸಿದರು. ಅನುಷಾ.  ಎಸ್ ಶಾಲಾ ವರದಿ ಮಂಡಿಸಿದರು.ಮಕ್ಕಳಿಗಾಗಿ `ಯಂಗ್ ರೀಡರ್ ಅವಾರ್ಡ್~ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಟ್ರಸ್ಟ್‌ನ ಅಧ್ಯಕ್ಷ ಡಾ.ಶ್ವೇತಾ ಶಶಿಧರ್ ವಿಜೇತ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)