ಭಾನುವಾರ, ಜೂನ್ 13, 2021
26 °C

ಸಂಭ್ರಮ ತಾತ್ಕಾಲಿಕ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: `ಅಕ್ರಮ ಗಣಿಗಾರಿಕೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ತೀರ್ಪಿನಿಂದ ನಿರಾಳವಾಗಿರುವುದು ತಾತ್ಕಾಲಿಕ. ಸುಪ್ರೀಂ ಕೋರ್ಟ್‌ನಿಂದ ಇನ್ನೂ ಕ್ಲೀನ್‌ಚಿಟ್ ಸಿಕ್ಕಿಲ್ಲ. ಅವರು ಬಹಳ ಸಂಭ್ರಮಪಡುವುದರಲ್ಲಿ ಅರ್ಥವಿಲ್ಲ~ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಗುರುವಾರ ಉಡುಪಿಗೆ ಆಗಮಿಸಿದ ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.`ಲೋಕಾಯುಕ್ತರು ದಾಖಲಿಸಿದ್ದ ಎಫ್‌ಐಆರ್ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿರುವುದನ್ನು ತಾವು ಪ್ರಶ್ನಿಸುವುದಿಲ್ಲ. ಆದರೆ ಯಡಿಯೂರಪ್ಪ ವಿರುದ್ಧ ಇನ್ನೂ ಹಲವು ಗಂಭೀರ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ~ ಎಂದರು. ಈ ಮಾತನ್ನು ಮುಖ್ಯಮಂತ್ರಿ ಸದಾನಂದ ಗೌಡ ಅವರೂ ಹೇಳಿದ್ದಾರೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗಲು ಇನ್ನೂ ಅವಕಾಶವಿದೆ. ಇದು ಇಷ್ಟಕ್ಕೇ ಮುಗಿಯುವುದಿಲ್ಲ~ ಎಂದು ಭವಿಷ್ಯ ನುಡಿದರು.`ಯಡಿಯೂರಪ್ಪ ಅಕ್ರಮ ಗಣಿಗಾರಿಕೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಜೀವಂತವಾಗಿದೆ. ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ವರದಿ ಪರಿಶೀಲಿಸಿ ಸಿಬಿಐ ತನಿಖೆ ಕುರಿತು ಸುಪ್ರೀಂ ಕೋರ್ಟ್ ನಿರ್ಧರಿಸುವವವರೆಗೂ ಯಡಿಯೂರಪ್ಪ ಆರೋಪ ಮುಕ್ತರಲ್ಲ~ ಎಂದು ಅವರು ಪ್ರತಿಕ್ರಿಯೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.