ಶನಿವಾರ, ಜೂನ್ 19, 2021
26 °C

ಸಂವಿಧಾನಕ್ಕೆ ಬದ್ಧ- ಗಿಲಾನಿ ಸಮರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಹೋರ್ (ಪಿಟಿಐ): ಪಾಕಿಸ್ತಾನ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳ ಮರುವಿಚಾರಣೆಯ ಸಂಬಂಧ ಸ್ವಿಟ್ಜರ್‌ಲೆಂಡ್ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿರುವ ಸುಪ್ರೀಂಕೋರ್ಟ್ ತೀರ್ಪಿನಿಂದ ಗೊಂದಲಗೊಂಡಿರುವ ಪ್ರಧಾನಿ ಯೂಸುಫ್ ರಜಾ ಗಿಲಾನಿ, ತಾವು ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳುವುದಾಗಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರದ ಅಧ್ಯಕ್ಷರ ವಿರುದ್ಧ ಪ್ರಕರಣದ ಮರುವಿಚಾರಣೆ ಸಂಬಂದ ಸ್ವಿಟ್ಜರ್‌ಲೆಂಡ್ ಅಧಿಕಾರಿಗಳಿಗೆ ಮಾರ್ಚ್ 21ರೊಳಗೆ ಪತ್ರ ಬರೆಯಬೇಕೆಂದು ಸುಪ್ರೀಂಕೋರ್ಟ್ ಗಡುವು ನಿಗದಿ ಮಾಡಿದೆ.

ರಾಷ್ಟ್ರದ ಅಧ್ಯಕ್ಷ ಜರ್ದಾರಿ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ಮರು ವಿಚಾರಣೆ ಮಾಡಬೇಕೆಂದು ನ್ಯಾಯಾಲಯ ಈ ಹಿಂದೆಯೇ ಸೂಚಿಸಿತ್ತು. ಆದರೆ ಪ್ರಧಾನಿಯವರು ಈ ಸಂಬಂಧ ಕ್ರಮ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಈ ವಿಷಯದಲ್ಲಿ ತಮ್ಮಿಂದ ನ್ಯಾಯಾಂಗ ನಿಂದನೆಯೇನೂ ಆಗಿಲ್ಲ ಎಂದೂ ಗಿಲಾನಿ ತಮ್ಮನ್ನು ಸಮರ್ಥಿಸಿಕೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.