ಮಂಗಳವಾರ, ನವೆಂಬರ್ 19, 2019
28 °C

ಸಂವಿಧಾನದ ಆಶಯ ರೂಢಿಸಿಕೊಳ್ಳಲು ಸಲಹೆ

Published:
Updated:

ಬೆಂಗಳೂರು: `ಮಹಿಳೆಯರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಬೇಕು ಹಾಗೂಸಂವಿಧಾನದ ಆಶಯಗಳನ್ನು ಎಲ್ಲರೂ ರೂಢಿಸಿಕೊಳ್ಳಬೇಕು' ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ನಟರಾಜ್ ಹುಳಿಯಾರ್ ಸಲಹೆ ನೀಡಿದರು.ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ವಿಶ್ವವಿದ್ಯಾಲಯದ ಪ್ರೊ.ವೆಂಕಟಗಿರಿ ಗೌಡ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ `ಭಾರತ ಸಂವಿಧಾನ-63' ಮತ್ತು ವಿಚಾರಸಂಕಿರಣದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.

ದೇಶದ ಎಲ್ಲ ಜಾತಿಗಳನ್ನು ಗುರ್ತಿಸಲು ಇರುವ ವಿಧಾನವೇ ಮೀಸಲಾತಿ. ಅಂಬೇಡ್ಕರ್ ಅವರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ದ್ವಾರಕನಾಥ್ ಮಾತನಾಡಿ, ದೇಶದ ಸಂವಿಧಾನದಲ್ಲಿ ಎಲ್ಲ ದಲಿತರಿಗೆ ಸಮಾನವಾದ ಮೀಸಲಾತಿ ನೀಡಬೇಕು ಎಂದರು. `ಪ್ರಜಾವಾಣಿ' ಸಹಾಯಕ ಸಂಪಾದಕ ದಿನೇಶ್ ಅಮೀನ್‌ಮಟ್ಟು ವಿಚಾರಸಂಕಿರಣವನ್ನು ಉದ್ಘಾಟಿಸಿದರು. ಬೆಂಗಳೂರು ವಿವಿ ಕುಲಸಚಿವೆ ಪ್ರೊ.ಕೆ.ಕೆ.ಸೀತಮ್ಮ, ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಸಿ.ಮೈಲಾರಪ್ಪ ಹಾಜರಿದ್ದರು.

ಪ್ರತಿಕ್ರಿಯಿಸಿ (+)