ಶುಕ್ರವಾರ, ಏಪ್ರಿಲ್ 23, 2021
28 °C

ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾದಾಮಿ: ವಿಶ್ವದಲ್ಲಿಯೇ ಭಾರತ ದೇಶವು ಅತ್ಯಂತ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿದ ರಾಷ್ಟ್ರವಾಗಿದೆ. ಇಲ್ಲಿರುವ ವಿವಿಧ ಜಾತಿ ಧರ್ಮಗಳಿಗೆ ಅನುಸಾರವಾಗಿ ಡಾ.ಬಿ.ಅರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದರು. ಸಂವಿಧಾನ ಬದ್ಧವಾಗಿ ನಾವೆಲ್ಲರೂ ಬದುಕಬೇಕು. ನಮ್ಮ ದೇಶದ ಸಂವಿಧಾನಕ್ಕೆ ಗೌರವಿಸಿದರೆ ಡಾ.ಬಿ.ಆರ್. ಆಂಬೇಡ್ಕರ ಅವರನ್ನು ಗೌರವಿಸಿದಂತೆ ಎಂದು ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಹೇಳಿದರು.ಅವರು ಇಲ್ಲಿನ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ತಾಲ್ಲೂಕಾ ಆಡಳಿತದ ಆಶ್ರಯದಲ್ಲಿ ಜರುಗಿದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಹಿಂದುಳಿದ ವರ್ಗದ ಜನಾಂಗ ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಸರಿಯಾಗಿ ಶಿಕ್ಷಣವನ್ನು ಕೊಡಬೇಕು. ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಬೇಕೆಂದು ಹೇಳಿದರು. ಡಾ.ಬಿ.ಅರ್. ಅಂಬೇಡ್ಕರ್ ಶಿಕ್ಷಣ, ಬದುಕು ಮತ್ತು ಹೋರಾಟದ ಕುರಿತು ಮುಚಖಂಡಿ ಮೊರಾರ್ಜಿ ವಸತಿ ಶಾಲೆಯ ಪ್ರಾಚಾರ್ಯ ಎಂ.ಬಿ. ಹೂಗಾರ ಉಪನ್ಯಾಸ ನೀಡಿದರು. ಜಿ.ಪಂ. ಸದಸ್ಯ ಎನ್.ಎಸ್. ಬೊಮ್ಮನಗೌಡರ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ರಚನೆ ಕುರಿತು ತಿಳಿಸಿದರು.

 

ಇದೇ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸುಳ್ಳ ಗ್ರಾಮದ ಜಾನಪದ ಕಲಾವಿದ ಹನಮಪ್ಪ ಮಾದರ ಇವರಿಗೆ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಸನ್ಮಾನಿಸಿದರು. ಅಂತರಜಾತಿ ವಿವಾಹವಾದ ಫಕೀರಪ್ಪ ಭಜಂತ್ರಿ ದಂಪತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನದ ಚೆಕ್ ಅನ್ನು ವಿತರಿಸಲಾಯಿತು. ತಾ.ಪಂ. ಅಧ್ಯಕ್ಷೆ ಸುಶೀಲಾಬಾಯಿ ಹೆಬ್ಬಳ್ಳಿ, ತಾ.ಪಂ. ಉಪಾಧ್ಯಕ್ಷ ತಾಯಪ್ಪ ಮಾದರ, ಪುರಸಭೆ ಅಧ್ಯಕ್ಷೆ ಶಾಂತಮ್ಮ ಅಮರಗೋಳ, ತಾ.ಪಂ. ಸದಸ್ಯರು ಹಾಗೂ ಅಧಿಕಾರಿಗಳು ವೇದಿಕೆಯಲ್ಲಿದ್ದರು.

ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಮಾರಂಭದಲ್ಲಿ ಹಾಜರಿದ್ದರು.ಸಮಾರಂಭಕ್ಕೆ ಮೊದಲು ಮೇಣಬಸದಿ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದ ನಂತರ ನಗರದ ಮುಖ್ಯ ರಸ್ತೆಯಲ್ಲಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ತಾಲ್ಲೂಕಾಡಳಿತ ಉತ್ಸವ ಸಮಿತಿ ಅಧ್ಯಕ್ಷ, ತಹಸೀಲ್ದಾರ ಮಹೇಶ ಕರ್ಜಗಿ ಸ್ವಾಗತಿಸಿದರು. ಎನ್.ಎಲ್. ಮುದಕಪ್ಪ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.