ಗುಲ್ಬರ್ಗ: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಗುಲ್ಬರ್ಗ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದಶರಥ ನಾಯಕ ವಿರುದ್ಧ ಇಲ್ಲಿನ ಜಿಲ್ಲಾ ನ್ಯಾಯಾಲಯ ಭಾನುವಾರ ಆರೋಪ ನಿಗದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದಶರಥ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗಿದೆ.

ಆರೋಪಗಳ ವಿವರ: ಐಪಿಸಿ 509–ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಉದ್ದೇಶವಿರುವ ಶಬ್ದ, ಸಂಜ್ಞೆ ಬಳಕೆ ಹಾಗೂ ಮಹಿಳೆ ಏಕಾಂತದಲ್ಲಿದ್ದಾಗ ಅಕ್ರಮ ಪ್ರವೇಶ ಮಾಡುವುದು, 384–ಹಣ ಸುಲಿಗೆ, 354, 354 (ಎ)–ಮಹಿಳೆಯ ಚಾರಿತ್ರ್ಯ ಹರಣ, 504–ಉದ್ದೇಶ ಪೂರ್ವಕವಾಗಿ ಶಾಂತಿ ಕದಡಿದ ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 67 (ಎ) ಸೆಕ್ಷನ್ ಅಡಿ ದೋಷಾರೋಪಣೆ ಹೊರಿಸಿದೆ.

ವಿ.ಸಿ ಹಠಾವೋ ಇಂದು: ಗುಲ್ಬರ್ಗ ವಿವಿ ಅರ್ಥಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರಶೈವ ಯುವ ಬಳಗವು ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ ‘ವಿ.ಸಿ ಹಠಾವೋ; ವಿ.ವಿ ಬಚಾವೋ’ ಅಂಗವಾಗಿ ಪ್ರತಿಭಟನಾ ಮೆರವಣಿಗೆಯನ್ನು ಏರ್ಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.