ಸಂಶೋಧನೆಯಲ್ಲಿ ವೈಯಕ್ತಿಕ ಹಿತಾಸಕ್ತಿ ಬೇಡ

7

ಸಂಶೋಧನೆಯಲ್ಲಿ ವೈಯಕ್ತಿಕ ಹಿತಾಸಕ್ತಿ ಬೇಡ

Published:
Updated:

ಶಿವಮೊಗ್ಗ: ಸಂಶೋಧನೆಗಳು ಕೇವಲ ವೈಯಕ್ತಿಕ ಹಿತಾಸಕ್ತಿಗಳಿಗೆ ಮೀಸಲಾಗದೆ ಸಮಾಜಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ನಡೆಯುವಂತಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ (ಪರೀಕ್ಷಾಂಗ) ಡಾ.ಎಸ್. ಎ. ಜಾವೀದ್ ಹೇಳಿದರು.ನಗರದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಿ.ಎನ್.ಆರ್. ರಾವ್ ಸಭಾಂಗಣದಲ್ಲಿ ಗುರುವಾರ ರಾಜ್ಯಶಾಸ್ತ್ರ ಮತ್ತು ಸಾರ್ವಜನಿಕ ಆಡಳಿತ ವಿಭಾಗ ಹಮ್ಮಿಕೊಂಡಿದ್ದ `ಸಮಾಜ ವಿಜ್ಞಾನದಲ್ಲಿ ಸಂಶೋಧನೆಯ ಆಯಾಮಗಳು~ ಕುರಿತ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ದಿನಗಳಲ್ಲಿ ಸಂಶೋಧನೆಗಳು ತಮ್ಮ ಮಹತ್ವ ಕಳೆದುಕೊಳ್ಳುತ್ತಿದ್ದು, ಸಂಶೋಧನೆ ನಡೆಸುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ, ಮಾರ್ಗದರ್ಶಕರಿಗೂ ಅದರ ವಿಧಿ-ವಿಧಾನಗಳ ಬಗೆಗಿನ ಸಾಮಾನ್ಯ ಅರಿವು ಇಲ್ಲದಿರುವುದು ವಿಷಾದನೀಯ ಎಂದ ಅವರು, ಇಂತಹ ಸಂಶೋಧಕರಿಂದ ಹೊಸ ವಿಷಯದ ಮೇಲೆ ಬೆಳಕು ಚೆಲ್ಲುವ ಕಾರ್ಯ ಎಂದಿಗೂ ಅಸಾಧ್ಯ ಎಂದರು.ಪ್ರಾಧ್ಯಾಪಕ ಪ್ರೊ.ಜೆ.ಎಸ್. ಸದಾನಂದ, ಕುವೆಂಪು ವಿ.ವಿ. ಸಿಂಡಿಕೇಟ್ ಸದಸ್ಯ ಎಸ್.ಪಿ. ದಿನೇಶ್,  ಕಾಲೇಜು ಪ್ರಾಂಶುಪಾಲ ಡಾ.ಬಿ.ಎಸ್. ಮಹಾದೇವಯ್ಯ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಶೇಖರ್, ಕುವೆಂಪು ವಿವಿ ಕನ್ನಡ ವಿಭಾಗ ಮುಖ್ಯಸ್ಥ ಪ್ರೊ.ಸಣ್ಣರಾಮ, ಡಾ.ಮೇಟಿ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.ವಿಭಾಗದ ಮುಖ್ಯಸ್ಥ ಡಾ.ಎಂ.ಎಚ್. ಪ್ರಹ್ಲಾದಪ್ಪ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಡಾ.ಮಂಜುನಾಥ್ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry