ಭಾನುವಾರ, ಜೂನ್ 13, 2021
21 °C

ಸಂಸತ್ ಸದಸ್ಯರ ಕಡೆಗಣಿಸುವ ಸಚಿವರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಸಂಸತ್ ಸದಸ್ಯ ಜಿ.ಎಂ. ಸಿದ್ದೇಶ್ವರ ದೂರಿದರು.ಕಾರ್ಯಕ್ರಮಗಳನ್ನು ಒಂದೇ ದಿನದಲ್ಲಿ ನಿಗದಿ ಮಾಡುತ್ತಾರೆ. ತಮ್ಮ ಲಭ್ಯತೆಯ ಬಗ್ಗೆ ಸೌಜನ್ಯಕ್ಕೂ ಕೇಳುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು  ಅಸಮಾಧಾನ ವ್ಯಕ್ತಪಡಿಸಿದರು.ಮುಂದಿನ ಚುನಾವಣೆಯಲ್ಲಿ ವಿಧಾನಸಭೆಗೆ ಸ್ಪರ್ಧಿಸುತ್ತೀರಾ? ದಾವಣಗೆರೆ ಉತ್ತರ ಕ್ಷೇತ್ರದಿಂದ ನಿಲ್ಲುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭಾ ಕ್ಷೇತ್ರವೇ ತಮ್ಮ ಆಯ್ಕೆ. ಕೇಂದ್ರದಲ್ಲಿ ಮುಂದೆ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಎನ್‌ಡಿಎ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.ಕೋರ್ಟ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ ಎಫ್‌ಐಆರ್ ರದ್ದು ಮಾಡಿದೆ. ಅವರಿಗೆ ಸೂಕ್ತಸ್ಥಾನ ಮಾನ ನೀಡುವ ಕುರಿತು ಪಕ್ಷದ ತೀರ್ಮಾನಕ್ಕೆ ತಾವು ಬದ್ಧ ಎಂದರು.ರಸ್ತೆ ವಿಸ್ತರಣೆಗೆ ್ಙ 20 ಕೋಟಿ ಹಣ ಮೀಸಲಿದೆ. ಶೀಘ್ರದಲ್ಲೇ ರಸ್ತೆ ವಿಸ್ತರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.