ಸೋಮವಾರ, ಜೂನ್ 21, 2021
27 °C

ಸಂಸದರು, ಶಾಸಕರ ವಿಚಾರಣೆ: ವರ್ಷದೊಳಗೆ ನಡೆಸಲು ಸುಪ್ರೀಂ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಹಾಲಿ ಸಂಸದರು ಮತ್ತು ಶಾಸಕರ ಮೇಲಿನ ಅಪರಾಧ ಪ್ರಕರಣಗಳನ್ನು ಒಂದು ವರ್ಷದೊಳಗೆ ವಿಚಾರಣೆ ನಡೆಸಿ ಇತ್ಯರ್ಥ ಪಡಿಸುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ.ನ್ಯಾಯಮೂರ್ತಿ ಆರ್. ಎಂ. ಲೋಧಾ ಅವರಿದ್ದ ನ್ಯಾಯಾಪೀಠ ಮಹತ್ವದ ಈ ಆದೇಶ ಹೊರಡಿಸಿದೆ. ಒಂದು ವೇಳೆ ವರ್ಷದೊಳಗೆ ಪ್ರಕರಣ ಇತ್ಯರ್ಥವಾಗದಿದ್ದರೆ ಹೈಕೋರ್ಟ್‌ಗಳಿಗೆ ವರದಿ ನೀಡುವಂತೆ ಸೂಚಿಸಲಾಗಿದೆ.ಹಾಲಿ ಜನಪ್ರತಿನಿಧಿಗಳ ಮೇಲಿನ ಅಪರಾಧ, ರಾಜಕೀಯ ಮತ್ತು ಅತ್ಯಾಚಾರ ಪ್ರಕರಣಗಳ ವಿಚಾರಣೆ ವರ್ಷಗಟ್ಟಲೇ ನಡೆಯುತ್ತಿರುವುದರಿಂದ  ನ್ಯಾಯದಾನ ವಿಳಂಬವಾಗುತ್ತಿತ್ತು. ಇದನ್ನು ಪ್ರಶ್ನಿಸಿ ಸಾರ್ವಜನಿಕರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.