ಮಂಗಳವಾರ, ಏಪ್ರಿಲ್ 13, 2021
31 °C

ಸಂಸಾರ ನಿಭಾಯಿಸುವುದೇ ಸಾಧನೆಯಲ್ಲ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೇವಲ ಸಂಸಾರವನ್ನು ನಿಭಾಯಿಸುವುದೇ ಸಾಧನೆಯಲ್ಲ ಜೀವನದಲ್ಲಿ ಸಮಾಜಕ್ಕೆ ಕೊಡುಗೆ ನೀಡುವುದು ಮುಖ್ಯ ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.ಹವ್ಯಕ ಭವನದಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ, ಪದಗ್ರಹಣ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವುದು, ಮಕ್ಕಳ ಮದುವೆ ಮಾಡುವುದೇ ಸಾಧನೆಯಲ್ಲ. ಜತೆಗೆ, ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ನೊಂದವರಗೆ ನೆರವು ನೀಡುವುದು ಇಂತಹ ಸೇವೆಯನ್ನು ನಮ್ಮ ಸಮಾಜಕ್ಕೆ ಮಾಡುವುದು ಸಹ ಸಾಧನೆಯಾಗಿದೆ ಎಂದು ಅವರು ಹೇಳಿದರು.ಜಾತಿ, ಉಪಜಾತಿ ಹೆಸರಿನಲ್ಲಿ ಒಬ್ಬರು ಮತ್ತೊಬ್ಬರನ್ನು ದ್ವೇಷಿಸುವುದನ್ನು ಬಿಟ್ಟು, ಎಲ್ಲರು ಒಂದೇ ಎಂಬ ಭಾವನೆಯಿಂದ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರಾದ ಕೆ.ಪಿ. ಸುಧೀರ, ಡಾ.ಬಾಲಕೃಷ್ಣ ಹೆಗಡೆ, ಮಧುಮತಿ ಮೋಹನ್, ದೀಪಾ (ಪರವಾಗಿ ತಂದೆ ಪಂಡಿತ್), ಮಂಜುನಾಥ್ ಭಟ್  ಅವರನ್ನು ಸನ್ಮಾನಿಸಲಾಯಿತು.ಹವ್ಯಕ ಸಂಘದ ಅಧ್ಯಕ್ಷ ಅಶೋಕ್ ಜಿ. ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಇದ್ದರು. ಶ್ರೀಧರ ಮೂರ್ತಿ ಸ್ವಾಗತಿಸಿದರು. ಡಾ.ಬಾಲಕೃಷ್ಣ ಹೆಗಡೆ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.