ಬುಧವಾರ, ಏಪ್ರಿಲ್ 14, 2021
24 °C

ಸಂಸ್ಕಾರವೇ ಶಿಕ್ಷಣದ ಮೂಲ ಗುರಿಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಭಾರತೀಯ ಸನಾತನ ಸಂಸ್ಕೃತಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಪಸರಿಸುವ ಅಗತ್ಯವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿದ್ಧರಾಮ ಮನಹಳ್ಳಿ ಪ್ರತಿಪಾದಿಸಿದರು.ನಗರದ ಸಿದ್ಧರಾಮೇಶ್ವರ ಕಲ್ಯಾಣಮಂಟಪದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಕಿಡ್ಝಿ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.ಮಗುವನ್ನು ಸಮಾಜಮುಖಿ ವ್ಯಕ್ತಿಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದ್ದು, ಸಂಸ್ಕಾರ ನೀಡುವುದು ಶಿಕ್ಷಣದ ಮೂಲ ಗುರಿಯಾಗಬೇಕು ಎಂದರು. ಪ್ರಾಚಾರ್ಯೆ ದರ್ಶನಾ ಬರಾಣಪೂರ, ಅನ್ನಪೂರ್ಣ ಸರದೇಸಾಯಿ, ಅಶೋಕ ಸರದೇಸಾಯಿ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು. ಇದಾದ ಬಳಿಕ ಶಾಲಾ ಮಕ್ಕಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.