ಸೋಮವಾರ, ಮೇ 17, 2021
26 °C

`ಸಂಸ್ಕೃತ ವಿವಿ ನೇಮಕಾತಿಯಲ್ಲಿ ಅವ್ಯವಹಾರ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಸೇರಿದಂತೆ ಹಲವಾರು ವಿಷಯಗಳಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ದಾಖಲಾತಿಗಳ ಸಮೇತ ಹಗರಣಗಳನ್ನು ಅತಿ ಶೀಘ್ರದಲ್ಲಿ ಬೆಳಕಿಗೆ ತರುತ್ತೇನೆ' ಎಂದು ಕೊಳದ ಮಠ ಮಹಾಸಂಸ್ಥಾನದ ಡಾ. ಶಾಂತವೀರ ಸ್ವಾಮೀಜಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಸಂಸ್ಕೃತ ವಿ.ವಿ.ಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ಸಂಸ್ಕೃತ ಶಿಕ್ಷಣ ವಿಭಾಗದ ನಿವೃತ್ತ ಜಂಟಿ ನಿರ್ದೇಶಕ ಜಿ.ಚನ್ನವೀರಸ್ವಾಮಿ ಅವರು 8 ಪುಸ್ತಕಗಳನ್ನು ಬರೆದಿದ್ದಾರೆ. ಇದರ ಆಧಾರದ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.ವಿ.ವಿ.ಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುತ್ತಿಲ್ಲ. ಸಂಸ್ಕೃತ ಜ್ಞಾನವಿಲ್ಲದವರನ್ನು ಉನ್ನತ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಜೊತೆಗೆ ರಾಜ್ಯದಾದ್ಯಂತ 230 ಅನಧಿಕೃತ ಸಂಸ್ಕೃತ ಪಾಠಶಾಲೆಗಳನ್ನು ತೆರೆಯಲಾಗಿದೆ ಎಂದು ಆರೋಪಿಸಿದರು.

ಈ ಅವ್ಯವಹಾರಗಳ ಬಗ್ಗೆ ಸಿಬಿಐ ತನಿಖೆಯಾಗಬೇಕು ಹಾಗೂ ನೇಮಕಾತಿಯಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಉಗ್ರವಾದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ಕೊಟ್ಟರು.ರಾಜ್ಯ ಸರ್ಕಾರ  `ಬಸವಶ್ರೀ' ಪ್ರಶಸ್ತಿ ನೀಡುವಂತೆ `ಅಲ್ಲಮಶ್ರೀ' ಪ್ರಶಸ್ತಿಯನ್ನು ಸಹ ನೀಡಬೇಕು. ಜತೆಗೆ ಅಖಿಲ ಕರ್ನಾಟಕ ಭಜನಾ ಮಂಡಳಿಯಲ್ಲಿ 60 ವರ್ಷ ಸೇವೆ ಸಲ್ಲಿಸಿರುವ ಹಿರಿಯರಿಗೆ ಜಾನಪದ ಸಾಹಿತ್ಯ ಪರಿಷತ್ತಿನಲ್ಲಿ ಸದಸ್ಯತ್ವ ನೀಡಬೇಕು ಎಂದು ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.