ಬುಧವಾರ, ಮೇ 25, 2022
22 °C

ಸಕಾರಾತ್ಮಕವಾಗಿ ಸ್ಪಂದಿಸಲು ಪೊಲೀಸರಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಡಗಿ: `ಪೊಲೀಸರು ಎಂತಹ ಒತ್ತಡದ ಪರಿಸ್ಥಿತಿಯಲ್ಲಿಯೂ ಸಂಯಮ ಹಾಗೂ ಸಕಾರಾತ್ಮಕವಾಗಿ ವರ್ತಿಸಬೇಕು' ಎಂದು ಸಿಪಿಐ ಎಂ.ಎಚ್.ಚಿಕ್ಕರೆಡ್ಡಿ ಕಿವಿಮಾತು ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಪಿಎಸ್‌ಐ ನರಸಿಂಹಮೂರ್ತಿ ಬೇಲೂರ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.`ಸಮಸ್ಯೆ ಪರಿಹರಿಸಿಕೊಳ್ಳಲು ಪೊಲೀಸ್ ಠಾಣೆಗೆ ಬರುವ ಜನರೊಂದಿಗೆ ಗೌರವ ಹಾಗೂ ಸೌಜನ್ಯದಿಂದ ನಡೆದುಕೊಂಡಲ್ಲಿ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗುತ್ತಾರೆ. ಇದರಿಂದ ಇಲಾಖೆಗೆ ಒಳ್ಳೆಯ ಹೆಸರು ಬರುವುದಲ್ಲದೆ ಪೊಲೀಸರ ಕುರಿತು ಸಾರ್ವಜನಿಕರಲ್ಲಿನ ಭಯ ಮಾಯವಾಗುತ್ತದೆ' ಎಂದರು.ಪಿಎಸ್‌ಐ ಬೇಲೂರ ಮಾತನಾಡಿ, `ಸಿಬ್ಬಂದಿ ಸಹಕಾರದಿಂದ ಅಲ್ಪಾವಧಿಯಲ್ಲಿಯೇ ಉತ್ತಮವಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ' ಎಂದರು.

ಅಪರಾಧ ವಿಭಾಗದ ಪಿಎಸ್‌ಐ ಮಹಾಂತೇಶ ಮಾತನಾಡಿ, `ಪೊಲೀಸರು ಕರ್ತವ್ಯ ಹಾಗೂ ಪ್ರಾಮಾಣಿಕತೆಯಿಂದ ನಡೆದುಕೊಂಡರೆ ಸಾರ್ವಜನಿಕರ ಗೌರವಕ್ಕೆ ಪಾತ್ರರಾಗುತ್ತೇವೆ. ಹೀಗಾಗಿ ಇಲಾಖೆಯಲ್ಲಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು' ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಯಾದ ಎಎಸ್‌ಐ ಕಡೂರ ಹಾಗೂ ನಿಂಗಪ್ಪ ಮಾತನಾಡಿದರು. ಬಸವರಾಜ ಅಂಜುಟಗಿ ಸ್ವಾಗತಿಸಿದರು. ಅಗಸಿಮನಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.