ಶುಕ್ರವಾರ, ಮೇ 7, 2021
25 °C

ಸಕಾಲದಲ್ಲಿ 23 ಸಾವಿರ ಅರ್ಜಿ ವಿಲೇವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: `ಸಾರ್ವಜನಿಕರಿಗೆ ಕಾಲಮಿತಿ ಯೊಳಗೆ ಸರ್ಕಾರಿ ಸೇವೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೊಳಿ ಸಿರುವ  `ಸಕಾಲ~ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಕೇವಲ 23 ದಿನಗಳಲ್ಲಿ 23,598 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ~ ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಹೇಳಿದರು.ವಾರ್ತಾ ಇಲಾಖೆಯಿಂದ ಗುರುವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಬೆಳಗಾವಿ ವಿಭಾಗ ಮಟ್ಟದ ಬೀದಿ ನಾಟಕ ಕಲಾವಿದರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.`ಕಳೆದ ಏಪ್ರಿಲ್ 2ರಂದು ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸ ಲಾಗಿದೆ. ಕೇವಲ 23 ದಿನಗಳ ಅವಧಿಯಲ್ಲಿ ಈ ಯೋಜನೆಯಡಿ ಒಟ್ಟು 39,414 ಅರ್ಜಿಗಳು ಸ್ವೀಕೃತವಾಗಿದ್ದು, ಈವರೆಗೆ ಒಟ್ಟು 23,598 ಅರ್ಜಿಗಳು ವಿಲೇವಾರಿ ಮಾಡಲಾಗಿದೆ” ಎಂದು ಹೇಳಿದರು.ಅತಿ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಯಲ್ಲಿ ಸ್ವೀಕೃತವಾಗಿದ್ದು, ಇಲ್ಲಿ 20,630 ಅರ್ಜಿಗಳು ಬಂದಿವೆ. ಇದರಲ್ಲಿ 11,882 ಅರ್ಜಿಗಳನ್ನು ಇತ್ಯರ್ಥಪಡಿಸ ಲಾಗಿದೆ. ಸಾರಿಗೆ ಇಲಾಖೆಯಲ್ಲಿ 8,804 ಅರ್ಜಿಗಳು ಸ್ವೀಕತಗೊಂಡಿದ್ದು, 3,312 ಅರ್ಜಿಗಳು ವಿಲೇವಾರಿ ಆಗಿವೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ 4,865 ಅರ್ಜಿಗಳು ಬಂದಿದ್ದು, 4,520 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ವಾಣಿಜ್ಯ ಇಲಾಖೆಯಲ್ಲಿ 4,339 ಅರ್ಜಿಗಳು ಬಂದಿದ್ದು, 3,313 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 153 ಅರ್ಜಿಗಳ ಪೈಕಿ 123, ಗ್ರಾಮೀಣಾಭಿವದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯಲ್ಲಿ 192 ಪೈಕಿ 182, ಆರೋಗ್ಯ ಇಲಾಖೆಯಲ್ಲಿ 216 ಪೈಕಿ 160, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ 67 ಪೈಕಿ 66, ಕಾರ್ಮಿಕ ಇಲಾಖೆಯಲ್ಲಿ 148ರ ಪೈಕಿ 40 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಲ್ಲಿ ಈವರೆಗೆ ಈ ಯೋಜನೆಯಡಿ ಯಾವುದೇ ಅರ್ಜಿಗಳು ಸ್ವೀಕೃತಗೊಂಡಿಲ್ಲ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.ಬೀದಿ ನಾಟಕದ ನಿರ್ದೇಶಕ ರವೀಂದ್ರನಾಥ ಸಿರಿವರ, ರಾಜ್ಯದ 30 ಜಿಲ್ಲೆಗಳಲ್ಲಿ 300ಕ್ಕೂ ಹೆಚ್ಚು ಕಲಾವಿದರು ಮುಂದಿನ 3 ತಿಂಗಳುಗಳ ಕಾಲ ಜಾಥಾ ಹೊರಟು ಜನರಿಗೆ `ಸಕಾಲ~ ಯೋಜನೆ ಬಗ್ಗೆ ತಿಳಿವಳಿಕೆ ನೀಡಲಿದ್ದಾರೆ” ಎಂದು ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ವಾರ್ತಾ ಇಲಾಖೆ ಉಪನಿರ್ದೇಶಕ ಬಸವರಾಜ ಕಂಬಿ, ಎರಡು ದಿನಗಳ ಈ ತರಬೇತಿ ಶಿಬಿರದಲ್ಲಿ ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ವಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ 70 ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಕಲಾವಿದರು ಮೇ ತಿಂಗಳಿಂದ ತಮ್ಮ ತಮ್ಮ ಜಿಲ್ಲೆಗಳಲ್ಲಿ ಬೀದಿ ನಾಟಕದ ಮೂಲಕ `ಸಕಾಲ~ ಯೋಜನೆಯ ಅರಿವು ಮೂಡಿಸಲಿದ್ದಾರೆ” ಎಂದು ಹೇಳಿದರು.

ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಎಸ್. ಯು. ಜಮಾದಾರ ನಿರೂಪಿಸಿದರು.`ಸಕಾಲ~ ಎಂಬ ಬೀದಿ ನಾಟಕವನ್ನು ರವೀಂದ್ರನಾಥ ಸಿರಿವರ ರಚಿಸಿದ್ದು, ಹಾಡುಗಳನ್ನು ಎಸ್. ಮಂಜುನಾಥ, ಶಿವರಾಮಯ್ಯ ಹಾಗೂ ರವೀಂದ್ರನಾಥ ಸಿರಿವರ ರಚಿಸಿದ್ದಾರೆ. ಸಂಗೀತ ನಿರ್ದೇಶನವನ್ನು ವೆಂಕಟೇಶ ಜೋಶಿ ಮಾಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.