ಸಚಿನ್‌ಗೆ ಗೌರವ ಡಾಕ್ಟರೇಟ್: ವಿವಿ ನಿರ್ಧಾರ

7

ಸಚಿನ್‌ಗೆ ಗೌರವ ಡಾಕ್ಟರೇಟ್: ವಿವಿ ನಿರ್ಧಾರ

Published:
Updated:

ಬೆಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದ್ದು, ರಾಜ್ಯಪಾಲರ ಒಪ್ಪಿಗೆಗಾಗಿ ಕಾಯುತ್ತಿದೆ.ಇತ್ತೀಚೆಗೆ ನಡೆದ ವಿ.ವಿಯ ಸಿಂಡಿಕೇಟ್ ಸಭೆಯಲ್ಲಿ ತೆಂಡೂಲ್ಕರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ್ದು, ಸಂಬಂಧಪಟ್ಟ ನಿರ್ಣಯವನ್ನು ರಾಜ್ಯಪಾಲರ ಅನುಮತಿಗಾಗಿ ಕಳುಹಿಸಲಾಗಿತ್ತು. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು  ಈ ನಿರ್ಣಯಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry