ಬುಧವಾರ, ಮಾರ್ಚ್ 3, 2021
19 °C

ಸಚಿನ್ ತೆಂಡೂಲ್ಕರ್, ನಟಿ ರೇಖಾ; ರಾಜ್ಯಸಭಾ ಸದಸ್ಯತ್ವಕ್ಕೆ ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಚಿನ್ ತೆಂಡೂಲ್ಕರ್, ನಟಿ ರೇಖಾ; ರಾಜ್ಯಸಭಾ ಸದಸ್ಯತ್ವಕ್ಕೆ ಶಿಫಾರಸು

ನವದೆಹಲಿ (ಪಿಟಿಐ): ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಹಾಗೂ ಸಿನಿಮಾ ನಟಿ ರೇಖಾ ಅವರನ್ನು ರಾಜ್ಯಸಭೆ ಸದಸ್ಯರಾಗಿ ನಾಮಕರಣ ಮಾಡಲು ಪ್ರಧಾನಿ ಮನಮೋಹನಸಿಂಗ್ ಅವರು ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.11 ಜನರನ್ನು ಮೇಲ್ಮನೆ ಸದಸ್ಯರಾಗಿ ನಾಮಕರಣ ಮಾಡಲು ರಾಷ್ಟ್ರಾಧ್ಯಕ್ಷರಿಗೆ ಅಧಿಕಾರವಿದೆ. ಈಗಾಗಲೇ ಸಚಿನ್, ರೇಖಾ ಸೇರಿದಂತೆ ನಾಲ್ವರ ಹೆಸರನ್ನು ಪ್ರಧಾನಿ ಅವರು ಶಿಫಾರಸು ಮಾಡಿ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.ಗುರುವಾರ ಬೆಳಿಗ್ಗೆ ಸಚಿನ್ ತಮ್ಮ ಪತ್ನಿ ಅಂಜಲಿ ಜತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಬಿಸಿಸಿಐ ಸ್ವಾಗತ : ಸಚಿನ್ ತೆಂಡೂಲ್ಕರ್ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮಕರಣ ಮಾಡಲು ಶಿಫಾರಸು ಮಾಡಿರುವುದನ್ನು ಬಿಸಿಸಿಐ ಸ್ವಾಗತಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.