ಸಚಿವರ ಪುತ್ರ ಗ್ರಾ.ಪಂ. ಅಧ್ಯಕ್ಷ

ಹರಪನಹಳ್ಳಿ: ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಅವರ ಪುತ್ರ ಪಿ.ಟಿ.ಭರತ್, ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.
ಲಕ್ಷ್ಮಿಪುರ 250 ಮನೆಗಳಿರುವ ಒಂದು ಪುಟ್ಟ ಗ್ರಾಮ. ರಾಜ್ಯದಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆಯಾದಾಗ ಮೊಟ್ಟ ಮೊದಲ ಬಾರಿಗೆ ಈ ಗ್ರಾಮವನ್ನು ಪಂಚಾಯ್ತಿಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಸಾಮಾನ್ಯವರ್ಗಕ್ಕೆ ಮೀಸಲಿದ್ದ ಸ್ಥಾನದಿಂದ ಸದಸ್ಯರಾಗಿ ಆಯ್ಕೆಯಾದ ಭರತ್, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಅಧ್ಯಕ್ಷರಾಗಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.