ಗುರುವಾರ , ಮೇ 26, 2022
30 °C

ಸಚಿವರ ಭ್ರಷ್ಟಾಚಾರ: ಜೆಡಿಎಸ್‌ಗೆ ಒಲವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸಚಿವರು ನಡೆಸುತ್ತಿರುವ ಕೋ   ಟ್ಯಂತರ ರೂಪಾಯಿ ಮೊತ್ತದ ಭ್ರಷ್ಟಾಚಾರದಿಂದ ರೋಸಿ ಹೋಗಿರುವ ಜನತೆ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಕಡೆಗೆ ಒಲವು ತೋರಲಿದ್ದಾರೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ.ಅಮರನಾಥ ಶೆಟ್ಟಿ ಹೇಳಿದರು.ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ ಕೂಡಾ ನಿರ್ಣಾಯಕ ಫಲಿತಾಂಶ ಬರಲಿದ್ದು, ಈಗಾಗಲೇ ಜಿಲ್ಲೆಯಾದ್ಯಂತ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸಾಕಷ್ಟು ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಅವರು ತಿಳಿಸಿದರು.ಗ್ರಾಮೀಣ ಮಟ್ಟದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದಿಂದ ಸಿಗುವ ಸೌಲಭ್ಯ ದೊರಕಿಸಿಕೊಡುವುದರ ಜೊತೆಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆಯುವ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿದಾಗ ನಾವೆಲ್ಲರೂ ಒಟ್ಟಾಗಿ ಪಾಲ್ಗೊಳ್ಳುವುದಾಗಿ  ಭರವಸೆ ನೀಡಿದರು.ಪಕ್ಷದ ರಾಷ್ಟ್ರೀಯ ಸಮಿತಿ ಸದಸ್ಯ ಹೈದರ್ ಪರ್ತಿಪಾಡಿ, ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಮಹಮ್ಮದ್ ಕುಂಞಿ, ಉಪಾಧ್ಯಕ್ಷ ಎಸ್.ಮಹಮ್ಮದ್ ಶಫಿ  ಮಾತನಾಡಿ, ಪಕ್ಷದಲ್ಲಿ ಅಶಿಸ್ತು ಮತ್ತು ಪಕ್ಷವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ ಎಂದರು.ಇದೇ ವೇಳೆ ಪ್ರತೀ ತಾಲ್ಲೂಕು ಮತ್ತು ವಲಯ ಮಟ್ಟದಲ್ಲಿ ಹೊಸ ಸಮಿತಿ ರಚಿಸುವಂತೆ ಕಾರ್ಯಕರ್ತರು ಮನವಿ ಮಾಡಿದರು. ಬಿಜೆಪಿ ತೊರೆದು ಜೆಡಿಎಸ್ ಸೇರಿದ ಮಾಜಿ ತಾ.ಪಂ. ಸದಸ್ಯ ಎಂ.ಸೇಸಪ್ಪ ಗೌಡ ಅವರನ್ನು ಅಭಿನಂದಿಸಲಾಯಿತು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಪೂಜಾರಿ, ಕಾರ್ಯದರ್ಶಿ ಪ್ರವೀಣ        ಬೆಳ್ತಂಗಡಿ, ರಾಜ್ಯ ಅಲ್ಪಸಂಖ್ಯಾತರ ಘಟಕ ಕಾರ್ಯದರ್ಶಿ ಮಜೀದ್ ಸೂರಲ್ಪಾಡಿ, ಲಕ್ಷ್ಮಿನಾರಾಯಣ ಅಡ್ಯಂತಾಯ, ಚಂದಪ್ಪ ಶೆಟ್ಟಿ, ಮಹಿಳಾ ಘಟಕ ಅಧ್ಯಕ್ಷೆ ಜಯಲಕ್ಷ್ಮಿ ಹೆಗ್ಡೆ ಮಾತನಾಡಿದರು.ಸಮಿತಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಸ್ವಾಗತಿಸಿ, ಪುರಸಭೆ ಮಾಜಿ ಉಪಾಧ್ಯಕ್ಷ ಬಿ.ಮೋಹನ ವಂದಿಸಿದರು. ಗ್ರಾ.ಪಂ. ಸದಸ್ಯ ಅಬೂಬಕ್ಕರ್ ಅಮ್ಮುಂಜೆ ಕಾರ್ಯಕ್ರಮ ನಿರೂಪಿಸಿದರು.ಪಿಡಿಒಗೆ ಜಾತಿ ನಿಂದನೆ: ದೂರು

ಕಟಪಾಡಿ (ಪಡುಬಿದ್ರಿ):
ಕೋಟೆ ಗ್ರಾಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ (ಪಿಡಿಒ) ಜಾತಿ ನಿಂದನೆಗೈರು ಜೀವಬೆದರಿಕೆ ಒಡ್ಡಿದ ಬಗ್ಗೆ ಕಾಪು ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿದೆ.  ಸೋಮವಾರ ಮಧ್ಯಾಹ್ನ 12.30 ಕ್ಕೆ ಪ್ರಭಾಕರ ಎಂಬಾತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ ಎಂಬವರಿಗೆ ಅಲ್ಲಿದ್ದ ಸಾರ್ವಜನಿಕರ ಎದುರಲ್ಲೇ ಅವಾಚ್ಯಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.