ಶನಿವಾರ, ಆಗಸ್ಟ್ 15, 2020
26 °C

ಸಚಿವರ ರಾಜೀನಾಮೆ ಪ್ರಹಸನ: ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಚಿವರ ರಾಜೀನಾಮೆ ಪ್ರಹಸನ: ಧರಣಿ

ಬೆಂಗಳೂರು: `ರಾಜ್ಯ ಸರ್ಕಾರದ ಮಂತ್ರಿಗಳು ರಾಜೀನಾಮೆಯ ನಾಟಕದಲ್ಲಿ ಮುಳುಗಿ ರಾಜ್ಯದ ಜನತೆಯ ಹಿತ ಮರೆತಿದ್ದಾರೆ~ ಎಂದು ಆರೋಪಿಸಿ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಆನಂದರಾವ್ ವೃತ್ತದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.`ತಮ್ಮ ಸ್ವಾರ್ಥಕ್ಕಾಗಿ ಮಂತ್ರಿಗಳು ಭಿನ್ನಮತ, ಸಾಮೂಹಿಕ ರಾಜೀನಾಮೆ ಮತ್ತು ರಾಜೀನಾಮೆ ಹಿಂಪಡೆಯುವ ನಾಟಕವಾಡುತ್ತಿದ್ದಾರೆ. ಬಿಜೆಪಿ ಪಕ್ಷದ ಮಂತ್ರಿಗಳಿಗೆ ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನವೇ ಇದ್ದಂತಿಲ್ಲ. ಮಂತ್ರಿಗಳು ಸ್ವಾರ್ಥ ರಾಜಕಾರಣದ ಮೂಲಕ ರಾಜ್ಯದ ಆಡಳಿತಕ್ಕೆ ಕುತ್ತು ತಂದಿದ್ದಾರೆ. ರಾಜ್ಯಪಾಲರು ಈ ಸರ್ಕಾರವನ್ನು ವಿಸರ್ಜಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು~ ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.`ರಾಜ್ಯದ ಮಂತ್ರಿಗಳು ಮರದ ಮೇಲಿನ ಕೋತಿಗಳಂತೆ ವರ್ತಿಸುತ್ತಿದ್ದಾರೆ~ ಎಂದು ಆರೋಪಿಸಿದ ಕಾರ್ಯಕರ್ತರು ಮಂತ್ರಿಗಳ ಮುಖವಾಡ ಧರಿಸಿ ಅದೇ ರೀತಿಯಲ್ಲಿ ಅಣಕು ಪ್ರದರ್ಶನ ನಡೆಸಿದರು.

ಪ್ರತಿಭಟನೆಯಲ್ಲಿ ನಗರ ಯುವ ಕಾಂಗ್ರೆಸ್ ಸಮಿತಿಯ ಸದಸ್ಯರಾದ ಎಸ್.ಮನೋಹರ್, ಡಿ.ಎ.ಪ್ರಮೋದ್ ಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.