ಸೋಮವಾರ, ಏಪ್ರಿಲ್ 19, 2021
24 °C

ಸಚಿವರ ಸೋಗಿನಲ್ಲಿ ವಂಚನೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್ (ಪಿಟಿಐ): ಸಚಿವರ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಹಣ ನೀಡುವಂತೆ ಒತ್ತಾಯಿಸಿ ದೂರವಾಣಿ ಕರೆ ಮಾಡುತ್ತಿದ್ದ ಆರೋಪಿಯನ್ನು ಮಧ್ಯ ಪ್ರದೇಶದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.



ಬಂಧಿತನನ್ನು ಅಂಗದ ಯಾದವ್ ಎಂದು ಗುರುತಿಸಲಾಗಿದೆ. ಈತ ಇತ್ತೀಚೆಗೆ  ಗೃಹ ಸಚಿವ ನಾರಾಯಣ್ ಸಿಂಗ್ ಕುಶ್ವಾಹ ಎಂದು ಹೇಳಿಕೊಂಡು ಎಂಜಿನಿಯರ್ ಒಬ್ಬರಿಗೆ ರೂ 1 ಲಕ್ಷ ನೀಡುವಂತೆ ಒತ್ತಾಯಿಸಿ ಕರೆ ಮಾಡಿದ್ದ. ತಮ್ಮ ಹೆಸರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸಚಿವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ದೂರವಾಣಿ ಕರೆ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.