ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ

7

ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ

Published:
Updated:

ಬೀದರ್:  ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕುರಿತಂತೆ ಸಚಿವ ಉಮೇಶ್ ಕತ್ತಿ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶುಕ್ರವಾರ ಪ್ರತಿಭಟಿಸಿದರು.

ಪ್ರತಿಭಟನಾಕಾರರು ಸಚಿವರ ಪ್ರತಿಕೃತಿಯನ್ನು ದಹನ ಮಾಡಲು ಮುಂದಾದರು. ಆದರೆ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.ಅಖಂಡ ಕರ್ನಾಟಕ ಕುರಿತು ಎಲ್ಲರೂ ಮಾತನಾಡುವಾಗ ಸಚಿವರು ಪ್ರತ್ಯೇಕ ರಾಜ್ಯದ ಹೋರಾಟ ಕುರಿತು ಮಾತನಾಡುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ಬಿರಾದಾರ, ಪ್ರಧಾನ ಕಾರ್ಯದರ್ಶಿ ವಿನೋದ ಭಾತಂಭ್ರೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸಚಿವರು ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇ ಟ್ಟುಕೊಂಡು ಇಂಥ ಹೇಳಿಕೆಯನ್ನು ನೀಡಿದ್ದಾರೆ ಎಂದು ಟೀಕಿಸಿದರು.ಇಂಥ ಹೇಳಿಕೆಗಾಗಿ ಉಮೇಶ್ ಕತ್ತಿ ಅವರು ಜನತೆಯ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಯಲ್ಲಿ ವೇದಿಕೆಯ ವಿದ್ಯಾಸಾಗರ, ರವಿ, ನಾಗರಾಜ ಮಡಿವಾಳ, ರಮೇಶ ಲಾಡಗೆರೆ ಮತ್ತಿತರರು ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry