ಸೋಮವಾರ, ಏಪ್ರಿಲ್ 12, 2021
24 °C

ಸಚಿವ ಕಳಕಪ್ಪ ಬಂಡಿ ಜಿಲ್ಲಾ ಪ್ರವಾಸ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಕಳಕಪ್ಪ ಬಂಡಿ ಅವರು ಆ. 4ರಂದು ಬೆಳಿಗ್ಗೆ 8 ಗಂಟೆಗೆ ಗಜೇಂದ್ರಗಡಕ್ಕೆ ಆಗಮಿಸಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 12.30 ಗಂಟೆಗೆ ಹರ್ಲಾಪುರ-ತಿಮ್ಮೋಪುರ ರಸ್ತೆ ಭೂಮಿ ಪೂಜೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟಿಸುವರು.   ಮಧ್ಯಾಹ್ನ 2 ಗಂಟೆಗೆ ತಿಮ್ಮೋಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮಧ್ಯಾಹ್ನ 3ಗಂಟೆಗೆ ಗದಗ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ವೀಕ್ಷಣೆ, ಮಧ್ಯಾಹ್ನ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. 5 ರಂದು ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ಸಾರ್ವಜನಿಕ ಕುಂದುಕೊರತೆ ಆಲಿಸುವುದು. 10.15ಕ್ಕೆ ಇಟಗಿ ಗ್ರಾಮದಲ್ಲಿ ಆಯುರ್ವೇದ ಆಸ್ಪತ್ರೆ ಹಾಗೂ ಶುದ್ಧ ಕುಡಿಯುವ ನೀರಿನ ಉದ್ಘಾಟನೆ ಮತ್ತು ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸುವುದು. ಮಧ್ಯಾಹ್ನ 12 ಗಂಟೆಗೆ  ಕೋಟುಮಚಗಿಯಲ್ಲಿ ಆಯುರ್ವೇದ ಆಸ್ಪತ್ರೆ ಉದ್ಘಾಟನೆಯಲ್ಲಿ ಪಾಲ್ಗೊ ಳ್ಳುವರು.  6  ರಂದು ಬೆಳಿಗ್ಗೆ 10 ಗಂಟೆಗೆ ಗಜೇಂದ್ರಗಡದಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸುವರು.7ರಂದು ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿಗಳ ಜೊತೆ ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ  ಮುಖ್ಯಮಂತ್ರಿಗಳ ಜೊತೆ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡದ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 12.30ಕ್ಕೆ  ಮಲ್ಲಸಮುದ್ರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಾರ್ವಜನಿಕ ಸಭೆಯಲ್ಲಿ  ಭಾಗವಹಿಸುವರು.ಮಧ್ಯಾಹ್ನ  ಗದಗನ ನಾಗಸಮುದ್ರ ರಸ್ತೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ ಗಜೇಂದ್ರಗಡ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30ಕ್ಕೆ ಮುಖ್ಯಮಂತ್ರಿ ಜೊತೆ ರೋಣ ತಾಲ್ಲೂಕಿನ ಜಿಗಳೂರು ಗ್ರಾಮದಲ್ಲಿ ಬಹು ಗ್ರಾಮಗಳ ಕುಡಿಯುವ ನೀರಿನ ಕೆರೆ ಭೂಮಿ ಪೂಜೆ ಹಾಗೂ ಸರ್ಜಾಪುರ  ಮತ್ತು ಇತರೆ 13 ಗ್ರಾಮಗಳ ಕುಡಿಯುವ ನೀರಿನ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಸಂಜೆ 5.30ಕ್ಕೆ  ಗಜೇಂದ್ರಗಡಕ್ಕೆ ತೆರಳುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.