ಮಂಗಳವಾರ, ಮೇ 11, 2021
20 °C

ಸಚಿವ ಖಮರುಲ್ ಇಸ್ಲಾಂ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಪಿಟಿಐ): ವಕ್ಫ್ ಖಾತೆ ಸಚಿವ ಖಮರುಲ್ ಇಸ್ಲಾಂ ವಿರುದ್ಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಶನಿವಾರ ಖಾಸಗಿ ದೂರು ದಾಖಲಾಗಿದೆ.ಗುಲ್ಬರ್ಗದಲ್ಲಿರುವ ಪ್ರಸಿದ್ದ ಖ್ವಾಜಾ ಬಂದೇ ನವಾಜ್ ಷರೀಫ್ ದರ್ಗಾದ ಆಸ್ತಿಯನ್ನು ಅಕ್ರಮವಾಗಿ ವಶಕ್ಕೆ ಪಡೆದಿದ್ದಾರೆಂದು ಆರೋಪಿಸಿ ತಬರೇಜ್ ಪಾಷಾ ಅವರು ಲೋಕಾಯುಕ್ತ ನ್ಯಾಯಾಲಯದಲ್ಲ ಖಾಸಗಿ ದೂರು ದಾಖಲಿಸಿದ್ದಾರೆ.ಈ ಆಸ್ತಿಯಲ್ಲಿ ಅವರು ಫ್ಲಾಟ್‌ಗಳನ್ನು ನಿರ್ಮಿಸಿ ಒಂದೊಂದು ಮನೆಯನ್ನೂ 6 ಲಕ್ಷದಿಂದ 20 ಲಕ್ಷದವರೆಗೆ ಮಾರಾಟ ಮಾಡಿದ್ದಾರೆಂದು ಅವರು ದೂರಿನಲ್ಲಿ ಆಪಾದಿಸಿದ್ದಾರೆ.ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರರಾವ್ ಅವರು ಅರ್ಜಿಯ ವಿಚಾರಣೆಯನ್ನು ಜುಲೈ 18ಕ್ಕೆ ನಿಗದಿಪಡಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.