ಸಚಿವ ನಾರಾಯಣ ಸ್ವಾಮಿಗೆ ಹೆಚ್ಚುವರಿ ಜವಾಬ್ದಾರಿ

7

ಸಚಿವ ನಾರಾಯಣ ಸ್ವಾಮಿಗೆ ಹೆಚ್ಚುವರಿ ಜವಾಬ್ದಾರಿ

Published:
Updated:

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎ. ನಾರಾಯಣಸ್ವಾಮಿ ಅವರಿಗೆ ಹೊಸದಾಗಿ ಸೃಷ್ಟಿಸಿರುವ ಹಿಂದುಳಿದ ವರ್ಗಗಳ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲೇ ಇದ್ದ ಹಿಂದುಳಿದ ವರ್ಗಗಳ ಇಲಾಖೆಯನ್ನು ಇತ್ತೀಚೆಗೆ ಬೇರ್ಪಡಿಸಲಾಗಿತ್ತು. ಇನ್ನು ಮುಂದೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸಂಬಂಧಿಸಿದ ವಿಷಯಗಳು ಮಾತ್ರ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರಲಿವೆ.ಹೊಸ ಇಲಾಖೆ ಸೃಷ್ಟಿಯಾದ ಕಾರಣ ಖಾತೆ ಹಂಚಿಕೆ ಕೂಡ ಮಾಡಲಾಗಿದೆ. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ನಾರಾಯಣಸ್ವಾಮಿ ಅವರಿಗೆ ಹೆಚ್ಚುವರಿ ಖಾತೆ ಕೊಟ್ಟಿರುವುದಕ್ಕೆ ಬುಧವಾರ ಅಂಕಿತ ಹಾಕಿದರು.ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ನಗರ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್‌ಸಿ) ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ (ಕೆಯುಡಬ್ಲುಎಸ್‌ಬಿ) ಉಸ್ತುವಾರಿ ನೀಡಲಾಗಿದೆ. ಇದಕ್ಕೂ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಸರ್ಕಾರದ ಅಧಿಸೂಚನೆ ಹೊರಬಿದ್ದಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry