ಭಾನುವಾರ, ಅಕ್ಟೋಬರ್ 20, 2019
25 °C

ಸಚಿವ ರಾಮದಾಸ್ ದಿಢೀರ್ ಭೇಟಿ

Published:
Updated:

ಬೆಂಗಳೂರು: ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಮತ್ತು ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಸ್ಪತ್ರೆಗಳಲ್ಲಿನ ಆಡಳಿತ ಮತ್ತು ತಾಂತ್ರಿಕ ಲೋಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಇದೇ ವೇಳೆ ತಾಕೀತು ಮಾಡಿದರು. `ನಿಮ್ಹಾನ್ಸ್ ಮಾದರಿಯಲ್ಲಿ ಎಸ್‌ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಮತ್ತು ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Post Comments (+)