ಭಾನುವಾರ, ಮೇ 22, 2022
21 °C

ಸಚಿವ ರೇಣುಕಾಚಾರ್ಯಗೆ ಬೆದರಿಕೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ಶನಿವಾರ ಬಾಂಬ್ ಬೆದರಿಕೆ ಪತ್ರ ಬಂದಿದೆ.

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಿಂದ ಪತ್ರವು ರವಾನೆಯಾಗಿದ್ದು, ಸಚಿವರ ಹೊನ್ನಾಳಿಯ ನಿವಾಸಕ್ಕೆ ಪತ್ರ ತಲುಪಿದೆ.ಪತ್ರ ಬರೆದಿರವ ವ್ಯಕ್ತಿಯು ತಾನು ಎಲ್‌ಟಿಟಿಇ ಸಂಘಟನೆಗೆ ಸೇರಿದ್ದಾಗಿ ತಿಳಿಸಿದ್ದು, ಅಕ್ಟೋಬರ್ 12ರಂದು ರೂ 20 ಲಕ್ಷ ಹಣ ನೀಡಬೇಕು, ಇಲ್ಲದಿದ್ದರೆ ಬೆಂಗಳೂರು ಮತ್ತು ಹೊನ್ನಾಳಿ ಮನೆಗಳ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಆತ ಬೆದರಿಕೆ ಹಾಕಿದ್ದಾನೆ ಎಂದು ಮೂಲಗಳು ತಿಳಿಸಿವೆ.ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.