ಮಂಗಳವಾರ, ಜೂನ್ 15, 2021
21 °C

ಸ.ಜಗನ್ನಾಥರ ಕೃತಿಗಳ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಯುವ ಜನರು ತೊಡಗಿಕೊಂಡಾಗ ಮಾತ್ರ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ~ ಎಂದು ಗಾಯಕ ಮುದ್ದುಮೋಹನ್ ಅಭಿಪ್ರಾಯಪಟ್ಟರು.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕನ್ನಡ ಸಂಘವು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸ.ಜಗನ್ನಾಥ ಅವರ `ನವಿಲು ಗರಿ~ `ಎಲ್ಮೇಟ್ ಸಾ..ಎಲ್ಮೇಟು~ ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.`ಸಾಹಿತ್ಯಾಸಕ್ತಿ ಬೆಳೆಸಿಕೊಂಡರೆ ಉದ್ಯೋಗದಲ್ಲಿ ಉತ್ತಮ ಸಾಮರ್ಥ್ಯವನ್ನು ಪಡೆಯಬಹುದು. ಸಂಸ್ಕೃತಿ ಮತ್ತು ಸಾಹಿತ್ಯದ ಬಗೆಗೆ ಯುವ ಜನರ ಆಸಕ್ತಿ ಬೆಳೆಸಿಕೊಳ್ಳುವ ಅಗತ್ಯವಿದೆ~ ಎಂದ ಅವರು, ~ಜಾಗತೀಕರಣದ ಭರಾಟೆಯಲ್ಲಿ ದೇಸಿತನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯೋಗಗಳು ನಡೆಯಬೇಕು~ ಎಂದು ಹೇಳಿದರು.

 ಸಂಘದ ಎಸ್. ಸುಮಂತ್, ವಿ. ವೆಂಕಟ ಶಿವಾರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.