ಭಾನುವಾರ, ಮೇ 9, 2021
28 °C

ಸಣ್ಣ ಕೈಗಾರಿಕೆ: ಹೂಡಿಕೆದಾರರ ಸಮಾವೇಶ ಮೇ 2ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಸಣ್ಣ ಕೈಗಾರಿಕೆಗಳ ಬಂಡವಾಳ ಹೂಡಿಕೆದಾರರ ಸಮಾ ವೇಶವನ್ನು ಮೇ 2ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿನ ಪೂಜಾ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ಏರ್ಪಡಿಸ ಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.ಬೆಂಗಳೂರಿನ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಜೂನ್ 7 ಮತ್ತು 8ರಂದು ನಡೆಯಲಿರುವ ರಾಜ್ಯ ಮಟ್ಟದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ಪೂರ್ವಭಾವಿಯಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದ ಪ್ರಯುಕ್ತ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಮತ್ತು  ಶಿವಮೊಗ್ಗ  ಜಿಲ್ಲೆಗಳ ಉದ್ದಿಮೆದಾರರು/ ಕೈಗಾರಿಕೋದ್ಯಮಿಗಳಿಗೆ ರೋಡ್ ಶೋ ಹಮ್ಮಿಕೊಳ್ಳಲಾಗಿದೆ.ಬೃಹತ್ ಮತ್ತು ಮಧ್ಯಮ ಪ್ರಮಾಣ ಕೈಗಾರಿಕಾ ಸಚಿವರು ಹಾಗೂ ಸಣ್ಣ ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಆಸಕ್ತ ಉದ್ದಿಮೆದಾರರು, ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳು ಈ ರೋಡ್ ಶೋದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.ಜಿಲ್ಲೆಯಲ್ಲಿ ಹೊಸದಾಗಿ ಅತೀ ಸಣ್ಣ/ ಸಣ್ಣ ಮತ್ತು ಮಧ್ಯಮ ಕೈಗಾರಿ ಕೆಗಳನ್ನು ಸ್ಥಾಪಿಸುವ ಆಸಕ್ತಿ ಇರುವ ಉದ್ದಿಮೆದಾರರು ಹಾಗೂ ಹಾಲಿ ಉದ್ದಿಮೆದಾರರು ತಮ್ಮ ಯೋಜನೆ ವಿಸ್ತರಣೆ ಮಾಡಲು ಉದ್ದೇಶಿಸಿರು ವವರು, ಉದ್ದಿಮೆ ಸ್ಥಾಪನೆಯ ಆಸಕ್ತರು ಇದೇ 28ರೊಳಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಬಳ್ಳಾರಿ ಇವರಲ್ಲಿ ನೋಂದಾಯಿಸಬೇಕು. ಭಾವಿ ಬಂಡ ವಾಳ ಹೂಡಿಕೆದಾರರಿಗೆ/ ಉದ್ದಿಮೆ ದಾರರಿಗೆ ಮೇ 2ರಂದು ಒಡಂಬಡಿಕೆ ಪತ್ರ ವಿತರಿಸಲಾಗುವುದು.ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊಬೈಲ್ ಸಂಖ್ಯೆ 98454 83833/ 9964768334, 9448809192 ಅಥವಾ 242643/ 242858/ 242370 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.