ಶುಕ್ರವಾರ, ಏಪ್ರಿಲ್ 23, 2021
31 °C

ಸತ್ಯದ ಹುಡುಕಾಟಕ್ಕೆ ತರ್ಕವೇ ರಹದಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ವಿಜ್ಞಾನ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ತರ್ಕಗಳು ಸತ್ಯದ ಹುಡುಕಾಟಕ್ಕೆ ಸಹಕಾರಿಯಾಗಿವೆ ಎಂದು ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ರಂಗರಾಜ ವನದುರ್ಗ ಅಭಿಪ್ರಾಯಪಟ್ಟರು.ಚಳ್ಳಕೆರೆ ಪಟ್ಟಣದ ಎಚ್‌ಪಿಪಿಸಿ ಕಾಲೇಜಿನ ಸಾಂಸ್ಕೃತಿಕ ಸಮಿತಿ ಮಂಗಳವಾರ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಸಮಕಾಲೀನ ಸಂದರ್ಭದಲ್ಲಿ ಉಪನ್ಯಾಸಗಳು ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಸಾಧನೆಗೆ ಮುಖಾಮುಖಿಯಾಗಿರಬೇಕು. ಸರ್ಕಾರದ ಅಭಿವೃದ್ಧಿ ಯೋಜನೆಗಳು ನೆಲಕಚ್ಚುತ್ತಿರುವ ಈ ಸಂದರ್ಭದಲ್ಲಿ ಸಾಹಿತ್ಯದ ವಿದ್ಯಾರ್ಥಿಗಳು ಸೂಕ್ಷ್ಮಗಳನ್ನು ಅರ್ಥಮಾಡಿಕೊಂಡು ಬದುಕಬೇಕಾಗಿದೆ ಎಂದರು.ಅರಿವು ನೀಡಬೇಕಾದ ಅಕ್ಷರ ಸೂರ್ಯ ಗೊಂದಲದಲ್ಲಿರುವಾಗ ಇಂಗ್ಲಿಷ್ ಹಾಗೂ ಕನ್ನಡ ಶಾಲೆಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇಂದಿನ ಯುವ ಪೀಳಿಗೆ ಹಲವು ಇಲ್ಲಗಳ ನಡುವೆ ಜೀವಿಸುತ್ತಿದ್ದಾರೆ. ಜಗತ್ತಿನ ಅನೇಕ ದಾರ್ಶನಿಕರೂ ಕೂಡ ಇಲ್ಲಗಳ ನಡುವೆಯೇ ಸಾಧನೆ ಮಾಡಿರುವುದು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕಾಗಿದೆ ಎಂದು ನುಡಿದರು.ಬರ ಪೀಡಿತ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಇಂದಿನ ಸೋಲುಅಞಳನ್ನು ಸವಾಲಾಗಿ ಸ್ವೀಕರಿಸಿ, ಸಾಧನೆಯ ಮೆಟ್ಟಿಲುಗಳನ್ನು ಹತ್ತಬೇಕಾಗಿದೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.