ಶನಿವಾರ, ಮೇ 15, 2021
24 °C

ಸತ್ಯನಾರಾಯಣರಾವ್ ವಿರುದ್ಧ ಖಾಸಗಿ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸತ್ಯನಾರಾಯಣ ರಾವ್ ಅವರ ವಿರುದ್ಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಇದರ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಲಾಗಿದೆ.ನಿವೃತ್ತ ಐಎಎಸ್ ಅಧಿಕಾರಿ ವೀರಭದ್ರಯ್ಯ ಅವರು ಸಲ್ಲಿಸಿದ್ದ ಸ್ವಯಂ ನಿವೃತ್ತಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ರಾವ್ ಅವರು `ಅನುಕೂಲಕರ ವರದಿ' ನೀಡಿದ್ದರು' ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಲಕ್ಷ್ಮೀನಾರಾಯಣ ಎಂಬುವರು ಸಲ್ಲಿಸಿದ ದೂರಿನಲ್ಲಿ ಆರೋಪಿಸಲಾಗಿದೆ.2012ರ ಅಕ್ಟೋಬರ್ 31ರ ನಂತರ ವೀರಭದ್ರಯ್ಯ ಅವರು ಸ್ವಯಂ ನಿವೃತ್ತಿಗೆ ಅರ್ಹರಾಗಿದ್ದರು. ಆದರೆ ಅವರು 2010ರಲ್ಲೇ ನಿವೃತ್ತಿಗೆ ಅರ್ಜಿ ಸಲ್ಲಿಸಿದರು. ಆದರೆ ವೀರಭದ್ರಯ್ಯ ವಿರುದ್ಧ, ಘೋಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದ ಕಾರಣ, ಸರ್ಕಾರ ಅರ್ಜಿ ತಿರಸ್ಕರಿಸಿತು.ಅವರ ಘೋಷಿತ ಆದಾಯ ಮತ್ತು ಆಸ್ತಿಯ ನಡುವೆ ಶೇಕಡ 155ರಷ್ಟು ವ್ಯತ್ಯಾಸ ಕಂಡುಬಂದಿತ್ತು. ವೀರಭದ್ರಯ್ಯ ಅವರು 2012ರ ಡಿಸೆಂಬರ್‌ನಲ್ಲಿ ಅಂದಿನ ಮುಖ್ಯಮಂತ್ರಿಗಳಿಗೆ ಮತ್ತೆ ಮನವಿ ಸಲ್ಲಿಸಿದರು. ಸ್ವಯಂ ನಿವೃತ್ತಿ ನೀಡಿದರೆ, ತಮ್ಮ ವಿರುದ್ಧ ಇರುವ ಪ್ರಕರಣಗಳು ಇತ್ಯರ್ಥ ಆಗುವವರೆಗೆ ಪಿಂಚಣಿ ಪಡೆದುಕೊಳ್ಳುವುದಿಲ್ಲ ಎಂದರು. ಆಗ ಸರ್ಕಾರ ಲೋಕಾಯುಕ್ತದ ಅಭಿಪ್ರಾಯ ಕೋರಿತು. ಸತ್ಯ ಸಂಗತಿಗಳನ್ನು ಮುಚ್ಚಿಟ್ಟ ಎಡಿಜಿಪಿ ರಾವ್ ಅವರು ವೀರಭದ್ರಯ್ಯ ಅವರಿಗೆ ಸ್ವಯಂ ನಿವೃತ್ತಿ ನೀಡಲು ಅನುಕೂಲ ಆಗುವಂತ ವರದಿ ನೀಡಿದರು ಎಂದು ದೂರಿನಲ್ಲಿ ಹೇಳಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.