ನವ ದೆಹಲಿ: ಬುಧವಾರ ಡಿ.ವಿ.ಸದಾನಂದ ಗೌಡ ಮಂಡಿಸಿದ ರಾಜ್ಯ ಮುಂಗಡ ಪತ್ರಕ್ಕೆ ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ’ರಾಜ್ಯದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ನಿಶ್ಚಿಂತೆಯಿಂದ ಇರುವಂತೆ ಹಾಗೂ ಇನ್ನೂ ಉತ್ತಮ ಕೆಲಸಗಳನ್ನು ಮಾಡುವಂತೆ’ ಮುಖ್ಯಮಂತ್ರಿಗೆ ಬೆನ್ನುತ್ತಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.

ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆ ಅಂತ್ಯಗೊಂಡಿದ್ದು, ಸಭೆಯ ಬಳಿಕ ಮಾತನಾಡಿದ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ಅವರು ’ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಭೆಯಲ್ಲಿ ಬಜೆಟ್ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಫಲಿತಾಂಶ ಕುರಿತು ಚರ್ಚೆ ನಡೆಸಲಾಯಿತು’ ಎಂದಷ್ಟೇ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.