ಶನಿವಾರ, ಜುಲೈ 24, 2021
25 °C

ಸದಾಶಿವ ವರದಿ ಜಾರಿಗೆ ಆಗ್ರಹಿಸಿ ಜುಲೈ 8ಕ್ಕೆ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮಾದಿಗ ದಂಡೋರ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ಸರ್ಕಾರಕ್ಕೆ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಆಯೋಗದ ಶಿಫಾರಸಿನಂತೆ ಒಳಮೀಸಲಾತಿ ವರ್ಗೀಕರಣ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಿ  ಅನುಷ್ಠಾನಗೊಳಿಸಲು ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಜುಲೈ 8ಕ್ಕೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.ಪರಿಶಿಷ್ಟ ಜಾತಿಯವರ ಸಾಲ ಮನ್ನಾ ಮಾಡುವಂತೆ ಈ ಹಿಂದೆ ಅಧಿಕಾರದಲ್ಲಿ ಇದ್ದ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲ ಮನ್ನಾ ಮಾಡಿರುವುದರಿಂದ ಬಡ ಕುಟುಂಬಗಳಿಗೆ ಸಹಾಯವಾಗಿದೆ.ಅಂತೆಯೇ ಆಯೋಗದ ವರದಿಯನ್ನೂ ಜಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘಟನೆ ರಾಜ್ಯ ವಕೀಲರ ಘಟಕದ ಅಧ್ಯಕ್ಷ ಜಯಪ್ಪ, ಆಯೋಗದ ವರದಿ ಜಾರಿಯಾದ ನಂತರವೇ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.