ಬುಧವಾರ, ಏಪ್ರಿಲ್ 14, 2021
24 °C

ಸದಾಶಿವ ವರದಿ ಜಾರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಸಲ್ಲಿಸಿರುವ ವರದಿಯನ್ನು ಜಾರಿಗೆ ತರಬೇಕು ಮತ್ತು ಪರಿಶಿಷ್ಟ ಜಾತಿಯ ಜನರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ತಪ್ಪಿಸಬೇಕು ಎಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಸದಸ್ಯರು ನಗರದ ಹಲವೆಡೆ ಇತ್ತೀಚೆಗೆ ಪ್ರತಿಭಟನೆ ನಡೆಸಿದರು.ಮಲ್ಲೇಶ್ವರದ ಬಿಜೆಪಿ ಕಚೇರಿ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಹಾಗೂ ರೇಸ್‌ಕೋರ್ಸ್ ರಸ್ತೆಯ ಜೆ.ಡಿ.ಎಸ್ ಕಚೇರಿಯ ಎದುರು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸಿದರು.`ಸದಾಶಿವ ಆಯೋಗದ ವರದಿಯನ್ನು ವಿರೋಧಿಸುತ್ತಿರುವ ಸಚಿವರಾದ ರೇವುನಾಯಕ್ ಬೆಳಮಗಿ, ಅರವಿಂದ ಲಿಂಬಾವಳಿ ಅವರ ನಿಲುವು ಸರಿಯಲ್ಲ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಬಹಿರಂಗ ಪಡಿಸಿ, ಶೀಘ್ರವೇ ಅಂಗೀಕರಿಸಬೇಕು~ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎ.ಕೇಶವಮೂರ್ತಿ ಒತ್ತಾಯಿಸಿದರು.

 

ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮಾದಿಗ ದಂಡೋರ ಸಂಘಟನೆಯ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.