ಮಂಗಳವಾರ, ಜೂನ್ 15, 2021
27 °C

ಸಭೆಗೆ ಯಾರೂ ಕರೆದಿಲ್ಲ: ಅಶೋಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: `ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸಭೆ ಕರೆದಿರುವ ವಿಷಯ ನನಗೆ ತಿಳಿದಿಲ್ಲ. ಆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಯಾವ ಕರೆಯೂ ನನಗೆ ಬಂದಿಲ್ಲ~ ಎಂದು ಗೃಹ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದರು.ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಗಳ ಪ್ರಗತಿ ಪರಾಮರ್ಶಿಸಲು ಭಾನುವಾರ ನಗರಕ್ಕೆ ಆಗಮಿಸಿದ ಅವರು, ಸಭೆಗೂ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.`ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ. ಪಕ್ಷದ ಸಂಘಟನೆ ಬಗ್ಗೆ ಅವರ ಸಲಹೆ, ಸೂಚನೆಗಳನ್ನು ಪಡೆಯಲು ಪಕ್ಷದ ಇತರ  ನಾಯಕರು ಸಭೆ ಸೇರಿರಬಹುದು. ಇದರಲ್ಲಿ ತಪ್ಪೇನು? ಎಂದು ಕೇಳಿದರು.

ಸಿಎಟಿ ತೀರ್ಪು ಮೇಲ್ಮನವಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಸ್ಥಾನಕ್ಕೆ ಶಂಕರ ಬಿದರಿ ಅವರನ್ನು ನೇಮಿಸಿರುವುದನ್ನು ರದ್ದುಪಡಿಸಿ ಕೇಂದ್ರ ಆಡಳಿತ ನ್ಯಾಯಮಂಡಳಿಯು ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅಶೋಕ್ ತಿಳಿಸಿದರು.ಈ ಬಾರಿಯ ಬಜೆಟ್ ಅನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರೇ ಮಂಡಿಸಲಿದ್ದಾರೆ. ಈ ಕುರಿತು ಈಗಾಗಲೇ ಪಕ್ಷದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.