ಸಮಗ್ರ ಮೌಲ್ಯಮಾಪನ ಪದ್ಧತಿ ಪರಿಶೀಲನೆಗೆ ಕಾಗೇರಿ ಭರವಸೆ

ಸೋಮವಾರ, ಮೇ 20, 2019
33 °C

ಸಮಗ್ರ ಮೌಲ್ಯಮಾಪನ ಪದ್ಧತಿ ಪರಿಶೀಲನೆಗೆ ಕಾಗೇರಿ ಭರವಸೆ

Published:
Updated:

ಬೆಂಗಳೂರು: ಸಮಗ್ರ ಮೌಲ್ಯಮಾಪನ ಪದ್ಧತಿ ಕುರಿತು ಪರಿಶೀಲನೆ ನಡೆಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು `ಶಿಕ್ಷಣ ಉಳಿಸಿ ಸಮಿತಿ~ಯ ಪದಾಧಿಕಾರಿಗಳಿಗೆ ಭರವಸೆ ನೀಡಿದರು.ಸಮಿತಿಯ ಕಾರ್ಯದರ್ಶಿ ಕೆ. ಉಮಾ ಮತ್ತು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ (ಎಐಡಿಎಸ್‌ಒ) ರಾಜ್ಯ ಘಟಕದ ಅಧ್ಯಕ್ಷ ವಿ.ಎನ್. ರಾಜಶೇಖರ್ ನೇತೃತ್ವದ ನಿಯೋಗ ಕಾಗೇರಿ ಅವರನ್ನು ಬುಧವಾರ ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ರಾಜ್ಯ ಸರ್ಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದಾಗುವುದಿಲ್ಲ. ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಾದ ಎನ್‌ಇಇಟಿ ಮತ್ತು ಐಎಸ್‌ಇಇಟಿ ಐಚ್ಛಿಕವಾಗಿರುತ್ತದೆ ಎಂದು ನಿಯೋಗಕ್ಕೆ ಸಚಿವರು ಸ್ಪಷ್ಟನೆ ನೀಡಿದರು.ರಾಜ್ಯದಲ್ಲಿ ಈ ವರ್ಷದಿಂದ ಜಾರಿಗೊಳಿಸಲಾದ ಸಿಬಿಎಸ್‌ಸಿ ಪಠ್ಯಕ್ರಮದಲ್ಲಿ ತರಬೇಕಾದ ಮಾರ್ಪಾಡುಗಳ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry