ವಾಷಿಂಗ್ಟನ್ (ಐಎಎನ್ಎಸ್): ನ್ಯೂಯಾರ್ಕ್ನಲ್ಲಿ ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರ ಜತೆ ತನ್ನ ಅಧಿಕಾರಿಗಳು ನಡೆದುಕೊಂಡಿರುವ ರೀತಿ ಸೂಕ್ತವಾಗಿದೆ ಎಂದು ಅಮೆರಿಕ ಬುಧವಾರ ಸಮರ್ಥಿಸಿಕೊಂಡಿದೆ. ಅಲ್ಲದೆ ಭಾರತದಲ್ಲಿನ ತನ್ನ ರಾಜತಾಂತ್ರಿಕ ಅಧಿಕಾರಿಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಒತ್ತಾಯಿಸಿದೆ.

ಅಲ್ಲದೆ ದೇವಯಾನಿ ಅವರ ವಿಷಯವಾಗಿ ಬೇಷರತ್ತಾಗಿ ಕ್ಷಮೆಯಾಚಿಸುವಂತೆ ಭಾರತದ ಬೇಡಿಕೆಯನ್ನು ಅಮೆರಿಕ ಪರಿಗಣಿಸಲಿಲ್ಲ. ಪ್ರಕರಣದ ಕುರಿತು ವಿಷಾದ ವ್ಯಕ್ತಪಡಿಸಲು ನಿರಾಕರಿಸಿದ್ದು, ದೇವಯಾನಿ ಅವರ ವಿಚಾರಣೆ ವೇಳೆ ಸೂಕ್ತ ಕ್ರಮಗಳನ್ನು ಅನುಸರಿಸಲಾಗಿದೆ ಎಂದಿದೆ.

ಭಾರತದೊಂದಿಗಿನ ಸಂಬಂಧ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ದೇವಯಾನಿ ಪ್ರಕರಣ ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದ ಮೇಲೆ ಪರಿಣಾಮ ಬೀರದು ಎಂದು ರಾಜ್ಯ ವಕ್ತಾರೆ ಮೆರಿ ಹರ್ಫ್ ತಿಳಿಸಿದ್ದಾರೆ.

ದೇವಯಾನಿ ಅವರನ್ನು ಅಮೆರಿಕದ ಅಧಿಕಾರಿಗಳು ನಡೆಸಿಕೊಂಡ ರೀತಿಯನ್ನು ಭಾರತ ತೀವ್ರವಾಗಿ ಪ್ರತಿಭಟಿಸಿದ್ದು, ಪ್ರತೀಕಾರದ ಕ್ರಮವಾಗಿ ಅಮೆರಿಕದ ರಾಜತಾಂತ್ರಿಕರು ಹಾಗೂ ರಾಯಭಾರ ಕಚೇರಿ, ಕಾನ್ಸುಲ್ ಕಚೇರಿಗಳ ಸಿಬ್ಬಂದಿಗೆ ನೀಡಲಾದ ಹಲವು ವಿನಾಯ್ತಿ ಹಾಗೂ ಸೌಲಭ್ಯಗಳನ್ನು ಮಂಗಳವಾರ ವಾಪಸ್ ಪಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.