ಗುರುವಾರ , ಜೂನ್ 24, 2021
29 °C

ಸಮರ್ಪಕ ಅನುದಾನ ಬಿಡುಗಡೆಗೆ ಬಲಿಜ ಸಂಘದ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಲಿಜ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಸಮ ರ್ಪಕ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷಿಸುತ್ತಿದೆ’  ಎಂದು ಕರ್ನಾಟಕ ಬಲಿಜ ಸಂಘಗಳ ಒಕ್ಕೂಟದ ಅಧ್ಯಕ್ಷ ಟಿ.ವೇಣುಗೋಪಾಲ್‌ ಆರೋಪಿಸಿದರು.ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಇತ್ತೀಚೆಗೆ ಜಾತಿ ವಾರು ಸಂಘ-ಸಂಸ್ಥೆಗಳು, ಮಠಗಳಿಗೆ ಅನುದಾನವನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇರುವ ಸಮುದಾಯಕ್ಕೆ ಸಮ ರ್ಪಕವಾಗಿ  ಅನುದಾನ ಬಿಡುಗಡೆ ಮಾಡದೆ ವಂಚಿಸಲಾಗುತ್ತಿದೆ ಎಂದು ದೂರಿದರು.ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಪಡೆಯಲು ಬಲಿಜ ಸಮು ದಾಯವನ್ನು ಪ್ರವರ್ಗ 2 (ಎ) ಗೆ ಸೇರಿಸ ಬೇಕು. ಸಮುದಾಯದ ಅರ್ಹರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.ಬಲಿಜ ಸಂಘಗಳ ಒಕ್ಕೂಟದ ವತಿಯಿಂದ ಕೋಲಾರ, ಬಾಗೇಪಲ್ಲಿ,  ತಿಪಟೂರು, ಮೈಸೂರು, ಚಿಕ್ಕಬಳ್ಳಾ ಪುರ, ಶಿವಮೊಗ್ಗ ಸೇರಿದಂತೆ ಮತ್ತಿತರರ ಜಿಲ್ಲೆಗಳಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯದ ವಿದ್ಯಾರ್ಥಿನಿಲಯಗಳು, ಸಮುದಾಯ ಭವನಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ಯೋಗಿ ನಾರಾ ಯಣ ಯತೀಂದ್ರ’ ಅವರ ಅಧ್ಯಯನ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು  ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.