ಸೋಮವಾರ, ಮೇ 17, 2021
25 °C

ಸಮರ್ಪಕ ನೀರು ಪೂರೈಕೆ; ಅಧಿಕಾರಿಗಳಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲೆಯ ಗ್ರಾಮೀಣ ಮತ್ತು ನಗರದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಾಜ್‌ಕುಮಾರ್ ಖತ್ರಿ ಅವರು ನಿರ್ದೇಶನ ನೀಡಿದ್ದಾರೆ.ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಬರ ಪರಿಸ್ಥಿತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾ ಪಂಚಾಯಿತಿಯ ಕಾರ್ಯಪಾ ಲಕ ಅಭಿಯಂತರರು ಮತ್ತು ನಗರಸಭೆ ಆಯುಕ್ತರು ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮವಹಿಸಬೇಕು. ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಖತ್ರಿ ಅವರು ಸೂಚಿಸಿದರು.ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೆಸ್ಕ್ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದ ಖತ್ರಿ ಅವರು, ಗಿರಿಜನ ಕುಟುಂಬಗಳಿಗೆ ವಸತಿ ಕಲ್ಪಿಸುವ ಯೋಜನೆ ಯಾವ ಹಂತದಲ್ಲಿದೆ ಎಂದು ಗಿರಿಜನ ಅಭಿವೃದ್ಧಿ ಅಧಿಕಾರಿ ಗಂಟಿ ಅವರಿಂದ ಮಾಹಿತಿ ಪಡೆದರು.ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ ಗಳ ಮಕ್ಕಳಿಗೆ ಸಮರ್ಪಕವಾಗಿ ಪೌಷ್ಠಿಕ ಆಹಾರ ಪೂರೈಸಬೇಕು. ಏಪ್ರಿಲ್‌ನಿಂದ ಜಾರಿಗೆ ಬಂದಿರುವ ನೂತನ  ಪದ್ಧತಿ ಯಂತೆ ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಸರಬರಾಜಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯವರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಖತ್ರಿ ಅವರು ನಿರ್ದೇಶನ ನೀಡಿದರು.`ಸಕಾಲ~ಕ್ಕೆ ಒಳಪಡುವ ಕಂದಾಯ, ಆಹಾರ ಮತ್ತು ನಾಗರಿಕ ಸರಬರಾಜು, ಪೌರಾಡಳಿತ, ಗೃಹ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ಸಾರಿಗೆ, ಪಂಚಾಯತ್ ರಾಜ್ ಮತ್ತಿತರ ಇಲಾಖೆಗಳಿಗೆ ಎಷ್ಟು ಅರ್ಜಿಗಳು ಬಂದಿವೆ ಹಾಗೂ ವಿಲೇವಾರಿ ಆಗಿರುವ ಅರ್ಜಿಗಳ ಬಗ್ಗೆ ಖತ್ರಿ ಅವರು ಸಂಬಂದಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ ಮಾತನಾಡಿ, `ಸಕಾಲ~ ಪರಿಣಾಮಕಾರಿ ಜಾರಿ, ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಹಲವು ಮಾಹಿತಿ ನೀಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಬರುತ್ತಿದ್ದು ಆಯಾ ತಾಲ್ಲೂಕಿನ ತಹ ಶೀಲ್ದಾರರು ನಿಗದಿತ ಅವಧಿಯೊಳಗೆ ಅಗತ್ಯ ಪ್ರಮಾಣ ಪತ್ರಗಳನ್ನು ನೀಡು ತ್ತಿದ್ದಾರೆ ಎಂದು ಅವರು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಕೃಷ್ಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ವಿವರಣೆ ನೀಡಿದರು.ಹಿರಿಯ ಉಪ ವಿಭಾಗಾಧಿಕಾರಿ ಡಾ.ಎಂ.ಆರ್.ರವಿ ಅವರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ  `ಸಕಾಲ~ದ ಮಾಹಿತಿಗಳು ಉಪ ವಿಭಾಗಾಧಿಕಾರಿ ಕಚೇರಿಗೆ ಲಭ್ಯವಾಗುತ್ತಿಲ್ಲ. ಈ ಬಗ್ಗೆ ಮಾಹಿತಿ ದೊರಕುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿಯವರ ಗಮನಕ್ಕೆ ತಂದರು.ಮಡಿಕೇರಿ ನಗರಸಭೆ ಆಯುಕ್ತರಾದ ಶಶಿಕುಮಾರ್ ಮಾತನಾಡಿ, ಮಡಿಕೇರಿ ನಗರಕ್ಕೆ ಪ್ರತಿ ದಿನ 45 ಲಕ್ಷ ಲೀಟರ್ ಕುಡಿಯುವ ನೀರು ಬೇಕಾಗಿದ್ದು, ಸದ್ಯ 23 ಲಕ್ಷ ಲೀಟರ್ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ನಗರದಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.          ಉಪ ಅರಣ್ಯ ಸಂರಕ್ಷಣಾಧಿಕಾರಿ ಆನಂದ ಮಾತನಾಡಿ, ಜಿಲ್ಲೆಯಲ್ಲಿ ಆನೆ ಹಾವಳಿಗೆ ತುತ್ತಾಗಿ ಮರಣಹೊಂದಿದ ಕುಟುಂಬಗಳಗೆ ಮತ್ತು ಬೆಳೆ ಹಾನಿಗೊಳಗಾದ ಕುಟುಂಬದವರಿಗೆ ಪರಿಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್.ಎ. ರಾಮಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹಮ್ಮದ್ ಹಬೀಬುಲ್ಲಾ ಖಾನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ವಿಜಯಲಕ್ಷ್ಮಿ ಶೆಣೈ, ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಕೆ.ಜಿ. ಸಿದ್ದಯ್ಯ, ಜಿ.ಪಂ. ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಸೆಸ್ಕ್ ಕಾರ್ಯಪಾಲಕ ಅಭಿಯಂತರ ರಾದ ದಿವಾಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವ್ಯವಸ್ಥಾಪಕರಾದ ರಾಜಶೇಖರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ಹಾಗೂ ಸಕಾಲದಡಿ ಬಂದಿರುವ ಅರ್ಜಿಗಳು ಹಾಗೂ ವಿಲೇವಾರಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.   ಜಿಲ್ಲಾ ಪಂಚಾಯಿತಿ ಉಪಕಾರ್ಯ ದರ್ಶಿ ಎಸ್.ವೈ.ಬಸವರಾಜಪ್ಪ, ಮೂರು ತಾಲ್ಲೂಕಿನ ತಹಶೀಲ್ದಾರರು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹ ಣಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿ ಇತರರು ಇದ್ದು ಹಲವು ಮಾಹಿತಿ ನೀಡಿದರು. ಪರಿಸರ ಸಂರಕ್ಷಣೆ ಕುರಿತು ಸಾಕ್ಷ್ಯಚಿತ್ರವನ್ನು ಇದೇ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.