ಚಿತ್ರದುರ್ಗ: ಜಿಲ್ಲೆಯಲ್ಲಿನ ಭೀಕರ ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ತೊಂದರೆಯಾಗದಂತೆ ಕನಿಷ್ಠ ಎರಡು ತಿಂಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಭಾನುವಾರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಬರ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದ ಸಚಿವರು, ಮೇವಿನ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಿಂದ ಮೇವು ತರಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ. ಸಾಧ್ಯವಾದರೆ ಆಂಧ್ರಪ್ರದೇಶದಿಂದ ಮೇವು ಖರೀದಿಸಲಾಗುವುದು. ಈ ಬಗ್ಗೆ ಆತಂಕ ಬೇಡ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿನ ಮೇವಿನ ಪರಿಸ್ಥಿತಿಯ ವಿವರ ನೀಡಿದ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಜಯಣ್ಣ, ಪ್ರತಿದಿನ 2,400 ಮೆಟ್ರಿಕ್ ಟನ್ ಮೇವು ಬೇಕು. ತಿಂಗಳಿಗೆ 72 ಸಾವಿರ ಮೆಟ್ರಿಕ್ ಟನ್ ಅಗತ್ಯವಿದೆ. ಈಗ 89,200 ಮೆಟ್ರಿಕ್ ಟನ್ ಇದೆ ಎಂದು ವಿವರ ನೀಡಿದರು.

ಈ ವಿವರದಿಂದ ಅಸಮಾಧಾನಗೊಂಡ ಸಭೆಯಲ್ಲಿದ್ದ ಶಾಸಕರು, ಜಿಲ್ಲಾಡಳಿತ ಎಷ್ಟು ಮೇವು ಸಂಗ್ರಹಿಸಿದೆ. 89ಸಾವಿರ ಟನ್ ಯಾರ ಬಳಿ ಇದೆ ಎಂದು ಪ್ರಶ್ನೆಗಳ ಸುರಿಮಳೆಗೈದರು.

ಮಧ್ಯಪ್ರವೇಶಿಸಿದ ಈಶ್ವರಪ್ಪ, ಚುನಾಯಿತ ಪ್ರತಿನಿಧಿಗಳಿಗೆ ಸ್ವಲ್ಪ ಸೊಕ್ಕು ಇರುತ್ತೆ. ತಪ್ಪು ತಿಳಿದುಕೊಳ್ಳಬೇಡಿ. ಸಮಾಧಾನದಿಂದ ಸಮರ್ಪಕವಾಗಿ ಉತ್ತರ ನೀಡಿ ಎಂದರು.

89,200 ಟನ್ ರೈತರ ಬಳಿ ಇದೆ. ಜಿಲ್ಲೆಯಲ್ಲಿ ಆರಂಭವಾಗಲಿರುವ 15 ಗೋಶಾಲೆಗಳಿಗೆ ಪ್ರತಿ ದಿನ ಕನಿಷ್ಠ 100 ಟನ್ ಮೇವು ಅಗತ್ಯವಿದೆ ಎಂದು ಜಯಣ್ಣ ವಿವರಿಸಿದರು.

ಆಕಸ್ಮಿಕವಾಗಿ ನಾವು ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳಾಗಿದ್ದೇವೆ. ಇಬ್ಬರು ಒಟ್ಟಿಗೆ ಕೈಜೋಡಿಸಿ ಪ್ರಕೃತಿ ಮುನಿಸನ್ನು ನಿವಾರಿಸುವ ಪ್ರಯತ್ನ ಮಾಡಬೇಕು. ಕರ್ನಾಟಕದಲ್ಲಿ ಅತಿ ಹೆಚ್ಚು ಬರಪೀಡಿತ ಪ್ರದೇಶ ಚಿತ್ರದುರ್ಗ ಜಿಲ್ಲೆ. ಬರ ಪರಿಸ್ಥಿತಿಯಲ್ಲಿ ಮೈಮರೆತು ಕುಳಿತುಕೊಳ್ಳಬಾರದು ಎಂದು ಈಶ್ವರಪ್ಪ ಕಿವಿಮಾತು ಹೇಳಿದರು.

243 ಹಳ್ಳಿಗಳಲ್ಲಿ ಸಮಸ್ಯೆ
ಬರ ಪರಿಸ್ಥಿತಿಯ ವಿವರ ನೀಡಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಇದೇ ರೀತಿ ಬರ ಮುಂದುವರಿದರೆ 243 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಲಿದೆ. ಈಗಾಗಲೇ 6 ಸರ್ಕಾರಿ ಟ್ಯಾಂಕರ್ಗಳು ಮತ್ತು 78 ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು. ಟ್ಯಾಂಕರ್ಗಳ ದುರುಪಯೋಗ ತಡೆಗಟ್ಟಲು ಜಿಪಿಎಸ್ ಅಳವಡಿಸಲಾಗುವುದು. ಪ್ರಸ್ತುತ 5 ಹಳ್ಳಿಗಳಲ್ಲಿ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷ ಜಿಲ್ಲೆಯಲ್ಲಿ 15 ಗೋಶಾಲೆ ತೆರೆದು ಸುಮಾರು 16 ಸಾವಿರ ಜಾನುವಾರುಗಳಿಗೆ ಆಶ್ರಯ ಕಲ್ಪಿಸಲಾಗುವುದು. ಪ್ರಸ್ತುತ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗೋಶಾಲೆಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲ್ ಮಾತನಾಡಿ, 2011-12ನೇ ಸಾಲಿಗೆ ಉದ್ಯೋಗ ಖಾತ್ರಿ ಯೋಜನೆಗೆ ್ಙ 183 ಕೋಟಿ ನಿಗದಿಪಡಿಸಲಾಗಿತ್ತು. ಇದರಲ್ಲಿ ್ಙ 108 ಕೋಟಿ ಖರ್ಚು ಮಾಡಲಾಗಿದೆ ಎಂದು ವಿವರಿಸಿದರು.

ಜಿ.ಪಂ. ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, 600-650 ಅಡಿ ಅಂತರ್ಜಲ ಕುಸಿದಿದೆ. 696 ಕೊಳವೆಬಾವಿಗಳ ಪೈಕಿ 469 ಯಶಸ್ವಿಯಾಗಿದ್ದು, 227 ಕೊಳವೆಬಾವಿಗಳು ವಿಫಲವಾಗಿವೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆ. ಪುಟ್ಟಸ್ವಾಮಿ, ವಿಫಲವಾಗಿರುವ 227 ಕೊಳವೆಬಾವಿಗಳಿಗೆ ಕೈಪಂಪ್ ಅಳವಡಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ ಮೂರು ದಿನದಲ್ಲಿ ವರದಿ ನೀಡುವಂತೆ ಸೂಚಿಸಿದರು.

ಈಶ್ವರಪ್ಪ ಮಾತನಾಡಿ, ಯಾರು ನೀರಿಲ್ಲ ಅಂತ ಹೇಳಬಾರದು. ಸಮರ್ಪಕ ಕುಡಿಯುವ ನೀರಿಗೆ ಎಲ್ಲ ರೀತಿಯ ನೆರವು ನೀಡಲು ಸಿದ್ಧ ಎಂದು ಹೇಳಿದರು.

ಗೂಳಿಹಟ್ಟಿ ಶೇಖರ್ ಆಕ್ರೋಶ: ಉದ್ಯೋಗ ಖಾತ್ರಿ ಹೊರತುಪಡಿಸಿ ಜಿಲ್ಲೆಗೆ ಬರಪರಿಹಾರದ ಅಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ವಿಶೇಷ ಅನುದಾನ ನೀಡಬೇಕು. ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿಇಒ ಅನುಮಾನಸ್ಪದದಿಂದ ಪ್ರತಿಯೊಂದನ್ನು ನೋಡುತ್ತಾರೆ. ಸರ್ಕಾರ ಹಣ ಖರ್ಚು ಮಾಡಲು ಸಾಧ್ಯವಿಲ್ಲದಂತ ಪರಿಸ್ಥಿತಿ ಸೃಷ್ಟಿಯಾಗಿದೆ. ಆದ್ದರಿಂದ ಡಿಸಿ ಮತ್ತು ಸಿಇಒಗೆ ನೀವು ಎಚ್ಚರಿಕೆ ನೀಡಬೇಕು ಎಂದು ಶಾಸಕ ಗೂಳಿಹಟ್ಟಿ ಡಿ. ಶೇಖರ್ ಉಪ ಮುಖ್ಯಮಂತ್ರಿ ಈಶ್ವರಪ್ಪ ಅವರಲ್ಲಿ ಕೋರಿದರು.

ಉದ್ಯೋಗ ಖಾತ್ರಿ ಯೋಜನೆಗೆ 4 ತಿಂಗಳ ಹಿಂದೆ ್ಙ 50-60 ಲಕ್ಷ ನಿಗದಿಪಡಿಸಲಾಗಿದೆ. ಇದರಿಂದ ಜನರು ಕೆಲಸ ಸಿಗದೆ ಗುಳೆ ಹೋಗಿದ್ದಾರೆ ಎಂದು ಚಂದ್ರಪ್ಪ ತಿಳಿಸಿದರು.

ಬರ ಇರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕು ಎಂದು ಶಾಸಕ ತಿಪ್ಪೇಸ್ವಾಮಿ ಕೋರಿದರು.

ಸಮೀಕ್ಷೆಗೆ ಸೂಚನೆ
ಜಿಲ್ಲೆಯಲ್ಲಿ ಗುಳೆ ಹೋಗಿರುವ ಬಗ್ಗೆ 3-4 ದಿನಗಳಲ್ಲಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಉಸ್ತುವಾರಿ ಸಚಿವ ಪುಟ್ಟಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ವೇದಾವತಿ ನದಿಗೆ 8-10 ನದಿಗೆ ಬ್ಯಾರೇಜ್ ನಿರ್ಮಿಸಲು ಅನುದಾನ ಕಲ್ಪಿಸಬೇಕು ಎಂದು ಜಿ.ಪಂ. ಅಧ್ಯಕ್ಷ ರವಿಕುಮಾರ್ ಉಪ ಮುಖ್ಯಮಂತ್ರಿ ಅವರಲ್ಲಿ ಕೋರಿದರು.

ಸಂಸತ್ ಸದಸ್ಯ ಜನಾರ್ದನಸ್ವಾಮಿ ಮಾತನಾಡಿ, ತಾತ್ಕಾಲಿಕ ಪರಿಹಾರ ಕ್ರಮಗಳು ಬೇಡ. ಶಾಶ್ವತವಾಗಿ ಪರಿಹರಿಸುವ ಕುಡಿಯುವ ನೀರಿನ ಯೋಜನೆಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ಕೈಗೊಳ್ಳಲು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚಿಂತನೆ ನಡೆಸಿ ಪ್ರಸ್ತಾವನೆ ಸಲ್ಲಿಸಿದರೆ ಅನುಮೋದನೆ ಕಲ್ಪಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶಾಸಕ ಎನ್.ವೈ. ಗೋಪಾಲಕೃಷ್ಣ, ಎಸ್.ಕೆ. ಬಸವರಾಜನ್, ಡಿ. ಸುಧಾಕರ್, ವಿಧಾನ ಪರಿಷತ್ ಸದಸ್ಯ ಜಿ.ಎಚ್. ತಿಪ್ಪಾರೆಡ್ಡಿ, ಜಿ.ಪಂ. ಉಪಾಧ್ಯಕ್ಷೆ ಭಾರತಿ ಕಲ್ಲೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಾರಾಯಣಸ್ವಾಮಿ, ಪ್ರಾದೇಶಿಕ ಆಯುಕ್ತ ಶಂಭುದಯಾಳ್ ಮೀನಾ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀಕಾಂತ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.