ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿ ವ್ಯಾಪ್ತಿಯ ಕೃಷಿ ಪಂಪ್ಸೆಟ್ಗಳಿಗೆ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದನ್ನು ಖಂಡಿಸಿ ಜಯ ಕರ್ನಾಟಕ ತಾಲ್ಲೂಕು ಹಾಗೂ ಹೋಬಳಿ ಪದಾಧಿಕಾರಿಗಳು ಬನ್ನೂರು ಸೆಸ್ಕ್ ಕಚೇರಿಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.
ಬನ್ನೂರು ಹೋಬಳಿಯಲ್ಲಿ ಈಗಾಗಲೇ ಬರ ಪರಿಸ್ಥಿತಿ ಇದ್ದು, ಬೆಳೆಗಳು ಒಣಗುತ್ತಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ. ಈ ನಡುವೆ ಸೆಸ್ಕ್ ಗ್ರಾಮಾಂತರ ಪ್ರದೇಶಗಳ ಕೃಷಿ ಪಂಪ್ಸೆಟ್ಗಳಿಗೆ ಮಾಹಿತಿ ನೀಡದೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ.
ಇದರಿಂದ ರೈತರು ಬಿತ್ತನೆ ಮಾಡಲು ಹಾಗೂ ಬೆಳೆಗಳಿಗೆ ನೀರು ಪೂರೈಸಲು ಪರಿತಪಿಸುವಂತಾಗಿದೆ. ಈ ಬಗ್ಗೆ ಸೆಸ್ಕ್ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಹಾಗೂ ಎಂ.ಪಿ ಮಿಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೆಸ್ಕ್ ಜೆಇ ಹರೀಶ್ ಅವರನ್ನು ಇಲ್ಲಿಗೆ ಮರು ನೇಮಕ ಮಾಡಬೇಕು ಎಂದು ಮುಖಂಡರು ಆಗ್ರಹಿಸಿದರು.
ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಸೆಸ್ಕ್ ಕಚೇರಿ ಮುಂದೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಸಂಘಟನೆಯ ತಾಲ್ಲೂಕು ಅಧ್ಯಕ್ಷ ಆರ್.ಸಿ. ವೆಂಕಟೇಶ್, ಕಾರ್ಯದರ್ಶಿ ರವಿಕುಮಾರ್, ಬನ್ನೂರು ಟೌನ್ ಅಧ್ಯಕ್ಷ ಆಟೋ ದೇವರಾಜು, ಗೌರವಾಧ್ಯಕ್ಷ ಶಾಮಿಯಾನ ಮಧು, ಪಟ್ಟೆಹುಮಡಿ ಸುರೇಶ್, ಬೀಡನಹಳ್ಳಿ ಪ್ರವೀಣ, ಸ್ವಾಮಿ, ಮೇಗಲಕೊಪ್ಪಲು ರಾಜಣ್ಣ, ಮಹೇಶ್, ಮಂಜು, ನಾಗೇಂದ್ರ, ಸಿದ್ದಪ್ಪ, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.