ಭಾನುವಾರ, ಜೂನ್ 20, 2021
24 °C

ಸಮರ್ಪಕ ವಿದ್ಯುತ್ ಪೂರೈಕೆಗೆ ಗ್ರಾಮಸ್ಥರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ತಾಲ್ಲೂಕಿನ ಬಿ.ಜಿ. ಕೆರೆ ಬೆಸ್ಕಾಂ ಕಚೇರಿ ಎದುರು ಮಂಗಳವಾರ ಸೂರಮ್ಮನಹಳ್ಳಿ ಗ್ರಾಮಸ್ಥರು ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಗ್ರಾಮಕ್ಕೆ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೀವ್ರ ಅಡಚಣೆಯಾಗಿದ್ದು, ಕುಡಿಯುವ ನೀರಿಗಾಗಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

 

ಶಾಲಾ ಮಕ್ಕಳು ಬಿಸಿಯೂಟ ನಂತರ ಶಾಲೆ ಮುಂಭಾಗದಲ್ಲಿ ಇರುವ ಜಾನುವಾರುಗಳಿಗೆ ಕುಡಿಯಲು ನಿರ್ಮಿಸಿರುವ ತೊಟ್ಟಿಯಲ್ಲಿ ನೀರು ಕುಡಿಯುವಂತಹ ಸ್ಥಿತಿ ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.

ಈ ಬಗ್ಗೆ ಸಂಬಂದಪಟ್ಟ ಬೆಸ್ಕಾಂ ವಲಯ ಅಧಿಕಾರಿಗೆ ತಿಳಿಸಿದರೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.ಎಸ್.ಒ. ಪಾಲಯ್ಯ, ಎಸ್.ವಿ. ರಾಜಶೇಖರಪ್ಪ, ಡಿ. ಬೋರಯ್ಯ, ಎ.ಕೆ. ತಿಪ್ಪೇಸ್ವಾಮಿ, ಎಸ್. ಬಸಯ್ಯ, ಮಲ್ಲಿಕಾರ್ಜುನ, ಜಗನ್ನಾಥ್, ಬೋರಯ್ಯ, ಮಂಜುನಾಥ್ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.