ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಧರಣಿ

7

ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಧರಣಿ

Published:
Updated:

ಯಲಹಂಕ: ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ, ನಾವು ಸಹಕಾರ ನೀಡುವುದಿಲ್ಲ. ಕೇವಲ ನಾಮಕಾವಸ್ಥೆಗೆ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಶಾಸಕ ಕೃಷ್ಣಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.ಬೆಂಗಳೂರು ಉತ್ತರ (ಅಪರ) ತಾಲ್ಲೂಕು ತಹಶೀಲ್ದಾರ್ ಕಚೇರಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ದೊಡ್ಡಜಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.ನಾಲ್ಕೈದು ಸಭೆಗಳ ಬಳಕವೂ ಜನರು ಹಳೆಯ ಅಹವಾಲುಗಳನ್ನೇ ಸಲ್ಲಿಸುತ್ತಿದ್ದಾರೆ. ಇದರಿಂದ ಸಮಸ್ಯೆ ಪರಿಹಾರವಾಗಿಲ್ಲ ಎಂಬುದು ಸ್ಪಷ್ಟ. ಕೊನೆಯ ಬಾರಿ ಅಧಿಕಾರಿಗಳಿಗೆ ಗಡುವು ನೀಡಲಾಗುವುದು. ಆನಂತರವೂ ಸಮಸ್ಯೆಗಳನ್ನು ಪರಿಹರಿಸದಿದ್ದರೆ ಅಧಿಕಾರಿಗಳು ಸಭೆ ನಡೆಸುವ ಕಡೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಕೆಲವು ಭೂಗಳ್ಳರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ, ಜಾಲಾ ಹೋಬಳಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಕಬಳಿಸ್ದ್ದಿದು, ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.ತಿಂಗಳಲ್ಲಿ ಪರಿಹಾರ: ತಹಸೀಲ್ದಾರ್ ಬಿ.ವೆಂಕಟೇಶ್ ಮಾತನಾಡಿ, ಸಭೆಯಲ್ಲಿ ಜನರು ಸಲ್ಲಿಸಿದ ಅಹವಾಲುಗಳನ್ನು ತಿಂಗಳೊಳಗೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.ಉಪ ವಿಭಾಗಾಧಿಕಾರಿ ಕಾಂತರಾಜು, ಜಿ.ಪಂ.ಸದಸ್ಯರಾದ ಕೆ.ಅಶೋಕನ್, ದಾನೇಗೌಡ, ಶುಭಾ ನರಸಿಂಹಮೂರ್ತಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ.ಅನಂತ, ಅಧ್ಯಕ್ಷ ಚಾಂದ್‌ಪಾಷ, ಉಪಾಧ್ಯಕ್ಷೆ ಲಕ್ಷ್ಮೀ ರಮೇಶ್, ಗ್ರಾ.ಪಂ.ಅಧ್ಯಕ್ಷ ಆಂಜಿನಪ್ಪ, ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry