ಸೋಮವಾರ, ಮೇ 17, 2021
23 °C

ಸಮಸ್ಯೆ ಪರಿಹಾರವಾಗದಿದ್ದರೆ ಕೋರ್ಟ್ ಮೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ದಾಖಲೆಗಳಿದ್ದರೂ ಏಕಲವ್ಯ ಪ್ರಶಸ್ತಿ ನೀಡದೇ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅವಮಾನ ಮಾಡಿದೆ. ಈಗ ಉದ್ಭವಿಸಿರುವ ಸಮಸ್ಯೆಯನ್ನು ಬೇಗನೆ ಪರಿಹರಿಸುತ್ತೇವೆ ಎಂದು ಹೇಳಿ ಇಲಾಖೆ ಉದ್ದೇಶ ಪೂರ್ವಕವಾಗಿ ನಿರ್ಲಕ್ಷ್ಯ ಮಾಡುತ್ತಿದೆ. ಹೀಗಾದರೆ ನ್ಯಾಯಾಲಯದ ಮೊರೆ ಹೋಗುತ್ತೇನೆ~ ಎಂದು ಕ್ರೀಡಾಪಟು ರೋಷನ್ ಫರಾರೋ ಹೇಳಿದ್ದಾರೆ.`ಈ ಸಲದ ಏಕಲವ್ಯ ಪ್ರಶಸ್ತಿಗೆ ದೇಹದಾರ್ಢ್ಯ ಕ್ಷೇತ್ರದಿಂದ ನನ್ನನ್ನು ಆಯ್ಕೆ ಮಾಡಲಾಗಿತ್ತು. ಆದರೆ ದಾಖಲೆಗಳಲ್ಲಿ ಗೊಂದಲ ಉಂಟಾದ ಕಾರಣ ಅವುಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕ್ರೀಡಾ ಇಲಾಖೆಯ ಅಧಿಕಾರಿಗಳು ಹೇಳಿದ್ದರು. ಈಗ ಕೇಳಿದರೆ ಯಾರೂ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಈ ವರ್ಷದ ಜನವರಿಯಲ್ಲಿಯೇ ಎಲ್ಲಾ ದಾಖಲೆಗಳನ್ನು ಇಲಾಖೆಗೆ ನೀಡಿದ್ದೆ. ಎಂಟು ತಿಂಗಳು ಸಮಯವಿದ್ದರೂ ಪರಿಶೀಲನೆ ನಡೆಸದೇ ಪ್ರಶಸ್ತಿ ಪ್ರದಾನ ಸಮಾರಂಭದ ದಿನ ಅಗೌರವ ತೋರಲಾಗಿದೆ~ ಎಂದು ಅವರು `ಪ್ರಜಾವಾಣಿ~ಗೆ ತಮ್ಮ ಬೇಸರ ತೋಡಿಕೊಂಡರು.ಈ  ಮೊದಲು ಬಾಡಿ ಬಿಲ್ಡಿಂಗ್ ಸ್ಪರ್ಧೆಯ ಎತ್ತರ ವಿಭಾಗದಲ್ಲಿ ಕರಿ ಬಸಪ್ಪ, ಆರ್. ಪ್ರಸಾದ್, ಆ್ಯಂಟಿನಿ ಮೊರ್ಸಸ್, ಮಂಜುನಾಥ್ ಸೇರಿದಂತೆ ಇತರ ಆಟಗಾರರಿಗೆ ಏಕಲವ್ಯ ಪ್ರಶಸ್ತಿ ನೀಡಲಾಗಿದೆ. ಆದರೆ ನನಗೇಕೆ ಈ ತಾರತಮ್ಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.ಅಧಿಕಾರಿಗಳ ನಿರ್ಲಕ್ಷ್ಯ:  `ಪ್ರತಿ ವರ್ಷ ಏಕಲವ್ಯ ಪ್ರಶಸ್ತಿ ಆಯ್ಕೆ ವಿಚಾರ ವಿವಾದ ಮುಕ್ತವಾಗಿರುತ್ತಿತ್ತು. ಆದರೆ ಈ ವರ್ಷ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೊಂದಲದ ಗೂಡಾಗಿದೆ. ಇದಕ್ಕೆ ಕ್ರೀಡಾ ಇಲಾಖೆಯ ಕಾರಣ~ ಎಂದು ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ಅಧ್ಯಕ್ಷ ಕೆ. ಗೋವಿಂದರಾಜ್ ಟೀಕಿಸಿದ್ದಾರೆ. `ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಕೆಒಎನ ಇಬ್ಬರು ಸದಸ್ಯರು ಇದ್ದಾರೆ. ನಮ್ಮನ್ನು ಪರಿಗಣಿಸಿಲ್ಲ. ಆದರೆ ಇಲಾಖೆಯ ಅಧಿಕಾರಿಗಳೇ ದರ್ಬಾರ್ ನಡೆಸುತ್ತಿದ್ದಾರೆ. ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಮುಜುಗರ ಆಗಬಾರದು ಎನ್ನುವ ಕಾರಣಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾನು ಪಾಲ್ಗೊಂಡಿದ್ದೆ~ ಎಂದು ಅವರು ಹೇಳಿದ್ದಾರೆ.ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿತ್ತು. ಆದರೆ ಅವರ ಮಾತನ್ನೇ ಅಧಿಕಾರಿಗಳು ಧಿಕ್ಕರಿಸಿದ್ದಾರೆ. ಕೂಡಲೇ ಈ ಕುರಿತು ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.