ಸಿರಿಗೆರೆ: ಯಾವುದೇ ಒಂದು ಸಮಾಜವು ಜಾಗೃತವಾಗದಿದ್ದರೆ ಪ್ರಗತಿಯೆಡೆಗೆ ಸಾಗಲು ಸಾಧ್ಯವಿಲ್ಲ ಎಂಬುದನ್ನು ಅರಿತು ಶಿವಕುಮಾರ ಸ್ವಾಮೀಜಿ ಅವರು ಅದಕ್ಕೆ ಪೂರಕವಾದ ಶಿಕ್ಷಣ, ವಿವೇಕ, ತತ್ವಗಳನ್ನು ಸಾರುವ ಮೂಲಕ ಜಾಗೃತಿ ಮೂಡಿಸಿದರು ಎಂದು ಪ್ರಾಧ್ಯಾಪಕ ಹಾಗೂ ಲೇಖಕ ಡಾ.ಲೋಕೇಶ ಅಗಸನಕಟ್ಟೆ ಅಭಿಪ್ರಾಯಪಟ್ಟರು.

ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 19ನೇ ಶ್ರದ್ಧಾಂಜಲಿ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಇಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ರೀಗಳು ಅಣ್ಣನ ಬಳಗ, ಅಕ್ಕನ ಬಳಗ, ಕಲಾ ಸಂಘ ಹಾಗೂ ತರಳಬಾಳು ಪ್ರಕಾಶನಗಳ ಮೂಲಕ 12ನೇ ಶತಮಾನದ ಶರಣರ ವಚನಗಳ ಸಂದೇಶಗಳನ್ನು ಸಮಾಜಕ್ಕೆ ಸಾರುತ್ತಾ ಪ್ರತಿಯೊಬ್ಬರನ್ನೂ ಜಾಗೃತಗೊಳಿಸುವಲ್ಲಿ ಸತತ ಪ್ರಯತ್ನ ನಡೆಸಿದರು. ಅಂಧಶ್ರದ್ಧೆ, ಮೂಢ ನಂಬಿಕೆಗಳನ್ನು ತೊಡೆದು ಹಾಕುವಲ್ಲಿ ಅವರ ಸಾಧನೆ ಅವಿಸ್ಮರಣೀಯ ಎಂದು ಅವರು ನುಡಿದರು.

ವಚನ ಚಳವಳಿಯಲ್ಲಿ ನಿರತರಾಗಿ ನಂತರ ಸಾಮಾಜಿಕ ಕಳಕಳಿ ಉಳ್ಳವರಾಗಿದ್ದು ಅದರೊಂದಿಗೆ ಸಮಾಜದ ಎಲ್ಲರೂ ಸಂಘಟಿತರಾಗಿ ಪ್ರಗತಿಯತ್ತ ಮುಂದೆ ಸಾಗಲು ಪ್ರೋತ್ಸಾಹಿಸಿದರು. ಬಹು ಹಿಂದಿನಿಂದಲೇ ಜಾತಿ ಪದ್ಧತಿ ವಿರೋಧಿಸುತ್ತಾ ಬಂದಿದ್ದ ಅವರು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದರು ಅವರ ಇಂತಹ ಸಾಧನೆ ಶ್ಲಾಘನೀಯ ಎಂದು ಅವರು ಮೆಚ್ಚುಗೆ ಸೂಚಿಸಿದರು.

ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ನೇತೃತ್ವ ವಹಿಸಿದ್ದರು. ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ. ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಎಂ. ಚಂದ್ರಪ್ಪ, ಸುರೇಶ್ ಪಾಟೀಲ್, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್, ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸಿದ್ಧಯ್ಯ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಕೆಂಚಪ್ಪ, ಆಡಳಿತಾಧಿಕಾರಿ ಪ್ರೊ.ಎಸ್.ಬಿ. ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ತರಳಬಾಳು ಕಲಾ ಸಂಘದ ಕಲಾವಿದರು ಶಿವಕುಮಾರ ಸ್ವಾಮೀಜಿ ಅವರ ಜೀವನಾಧಾರಿತ `ಮಹಾ ಬೆಳಗು~ ನಾಟಕ ಪ್ರದರ್ಶಿಸಿದರು.

ಎಚ್.ಪಿ. ಸೌಮ್ಯಾ ಸ್ವಾಗತಿಸಿದರು.ಆರ್. ಸುಮಾ ವಂದಿಸಿದರು. ಎಚ್.ಜೆ. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.