ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪತ್ರಕರ್ತರ ಹೊಣೆ

ಬುಧವಾರ, ಜೂಲೈ 17, 2019
24 °C

ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪತ್ರಕರ್ತರ ಹೊಣೆ

Published:
Updated:

ಗುಂಡ್ಲುಪೇಟೆ: ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಹೊಣೆ ಹೆಚ್ಚಾಗಿದೆ ಎಂದು ಶಾಸಕ ಎಚ್.ಎಸ್.ಮಹದೇವಪ್ರಸಾದ್ ಭಾನುವಾರ ಹೇಳಿದರು.ಪಟ್ಟಣದ ಮದ್ದಾನೇಶ್ವರ ವಿದ್ಯಾಸಂಸ್ಥೆಯ ಮಹಾಮನೆಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಸಂವಿಧಾನದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.ಪಟ್ಟಣದಲ್ಲಿ ಪತ್ರಕರ್ತರ ಭವನ ನಿರ್ಮಿಸಲು ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದರು.

ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ದೃಶ್ಯ ಮಾಧ್ಯಮದ ಕಠಿಣ ಸ್ಪರ್ಧೆಗಳ ನಡುವೆಯೂ, ಪತ್ರಿಕೆಗಳು ತನ್ನದೇ ಹಿರಿಮೆಯನ್ನು ಹೊಂದಿವೆ. ಇದಕ್ಕೆ ಪ್ರಮುಖ ಕಾರಣ ಸಹೃದಯೀ ಓದುಗರು ಎಂದು ಹೇಳಿದರು.ಸಂಘದ ಗೌರವ ಅಧ್ಯಕ್ಷ ಎನ್. ನಾಗರಾಜು ಅವರನ್ನು ಸನ್ಮಾನಿಸಲಾಯಿತು.

ಪತ್ರಕರ್ತ ರವೀಂದ್ರಭಟ್ಟ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಕಾರ್ಯ ನಿರ್ವಾಹಕ ಅಧಿಕಾರಿ ಶಿವಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಡಿ.ಸಿ.ನಾಗೇಂದ್ರ, ಮಹಾದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ. ರಾಜಶೇಖರ್, ಬಿಜೆಪಿ ಸಂಘಟನಾ ಕಾರ್ಯದರ್ಶಿ ಶೈಲೇಶ್, ರೈತ ಮುಖಂಡ ಕೆ.ಆರ್. ಲೋಕೇಶ್, ಸೋಮಹಳ್ಳಿ ಮಲ್ಲೇಶ್, ಬೇಗೂರು ರಮೇಶ್, ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ವಿ.ಆರ್.ಸುಬ್ಬರಾವ್, ಜಿ.ಕೆ.ಬಾಬು, ಕೆ.ಎನ್.ಮಹದೇವಸ್ವಾಮಿ, ದೀಪಾ ಶ್ರೀನಿವಾಸ್,ಮಡಹಳ್ಳಿ ಮಹೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry