ಸಮಾಜ ಹಿತಕ್ಕೆ ಯುವಶಕ್ತಿ ಸದ್ಬಳಕೆ: ಶಾಸಕ ಬಂಗೇರ
ಬೆಳ್ತಂಗಡಿ: ಯುವಶಕ್ತಿ ದೇಶದ ಅಮೂಲ್ಯ ಸಂಪತ್ತಾಗಿದ್ದು, ಸಮಾಜದ ಹಿತಕ್ಕಾಗಿ ಸದುಪಯೋಗವಾಗಬೇಕು ಎಂದು ಶಾಸಕ ಕೆ.ವಸಂತ ಬಂಗೇರ ಹೇಳಿದರು.
ಪಟ್ಟಣದಲ್ಲಿ ಶನಿವಾರ ತಾಲ್ಲೂಕು ಮಟ್ಟದ ಯುವ ಸಮಾವೇಶ ಉದ್ಘಾಟಿಸಿದ ಅವರು, ಯುವಜನತೆ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿರಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.
ಯುವಜನತೆ ಶಕ್ತಿ-ಸಾಮರ್ಥ್ಯ-ಪ್ರತಿಭೆಯನ್ನು ಸೃಜನಾತ್ಮಕ ಚಟುವಟಿಕೆಗಳಿಗೆ ಬಳಸಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರೊ. ಗಣಪತಿ ಭಟ್ ಕುಳಮರ್ವ ಸಲಹೆ ನೀಡಿದರು.
ದ.ಕ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಧನಲಕ್ಷ್ಮಿ ಜನಾರ್ದನ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಶೈಲೇಶ್ ಕುಮಾರ್, ತಾ.ಪಂ. ಉಪಾಧ್ಯಕ್ಷ ಸಂತೋಷ್ ಕುಮಾರ್, ಧರ್ಣಪ್ಪ ಪೂಜಾರಿ, ಕೇಶವ ಬೆಳಾಲು ಮತ್ತು ಯುವಜನ ಸೇವಾಧಿಕಾರಿ ಕೆ.ಬಿ.ಕೇಶವ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.