ಬೆಂಗಳೂರು: ದೇಶದಲ್ಲಿ ಸಮಾನ ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮತಿಯ ಸದಸ್ಯರು ಸೋಮವಾರ ಪುರಭವನದ ಎದುರು ಪ್ರತಿಭಟನೆ ನಡೆಸಿದರು.

ದೇಶದ ಶಿಕ್ಷಣ ಕ್ರಮದಲ್ಲಿ ಸದ್ಯ ಅಸಮಾನತೆ ಇದ್ದು, ಇದರ ನಿವಾರಣೆಗಾಗಿ ಸಮಾನ ಶಿಕ್ಷಣ ನೀತಿಯನ್ನು ಜಾರಿಗೊಳಿಸಬೇಕು. ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು. ಬಡ ಮಕ್ಕಳ ವಿದ್ಯಾರ್ಥಿ ನಿಲಯಗಳನ್ನು ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

`ರಾಜ್ಯದಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಅನುಷ್ಠಾನಕ್ಕೆ ತರದ ಶಾಲೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ಬಡ ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕುಸ್ಮಾದ ಮಾಜಿ ಅಧ್ಯಕ್ಷ ಜಿ.ಎಸ್. ಶರ್ಮ ಅವರನ್ನು ಕೂಡಲೇ ಬಂಧಿಸಬೇಕು. ರಾಜ್ಯದ ಸರ್ಕಾರಿ ವಿದ್ಯಾರ್ಥಿ ನಿಲಯಗಳನ್ನು ಉನ್ನತೀಕರಿಸಬೇಕು~ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಾಹಿತಿ ಡಾ.ಕೆ. ಮರುಳಸಿದ್ಧಪ್ಪ ಒತ್ತಾಯಿಸಿದರು.

ಪುರಭವನದಿಂದ ಮುಖ್ಯಮಂತ್ರಿಗಳ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಾಕಾರರನ್ನು ಸ್ವಾತಂತ್ರ್ಯ ಉದ್ಯಾನದ ಬಳಿ ಪೊಲೀಸರು ತಡೆದರು. ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕುಮಾರ್ ಜಿ. ನಾಯಕ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ನವೀನ್ರಾಜ್ ಸಿಂಗ್ ಅವರು ಸಮಸ್ಯೆಗಳನ್ನು ಪರಿಹರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಪ್ರೊ.ಎನ್.ವಿ. ನರಸಿಂಹಯ್ಯ, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಾವಳ್ಳಿ ಶಂಕರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.